ಬೆಂಗಳೂರು: ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸುವ ಸಾರ್ವಜನಿಕರಿಂದ ಹಣ ಪಡೆದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
‘ಗೃಹ ಜ್ಯೋತಿ ಯೋಜನೆಗೆ ಅರ್ಜಿ ಹಾಕಲು ಕೆಲವರು ವೈಯಕ್ತಿಕವಾಗಿ ಹಾಗೂ ಕೆಲವು ಏಜೆನ್ಸಿ ಮೂಲಕ ಸಾರ್ವಜನಿಕರಿಂದ ಹಣ ಪಡೆಯುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ ಎಂದು ಡಿಕೆಶಿ ಟ್ವೀಟ್ ಮಾಡಿದ್ದಾರೆ.
‘ಜನರಲ್ಲಿ ನಾನು ಮಾಡುವ ಮನವಿ ಏನೆಂದರೆ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ನೀವು ಯಾರಿಗೂ ಲಂಚ ನೀಡಬೇಕಾಗಿಲ್ಲ. ನೀವೇ ನಿಮ್ಮ ಮೊಬೈಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಇದಕ್ಕೆ ಸಾರ್ವಜನಿಕರಿಂದ ಹಣ ಪಡೆಯುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.
ಗೃಹ ಜ್ಯೋತಿ: 20.10 ಲಕ್ಷ ನೋಂದಣಿ
ಬೆಂಗಳೂರು: ‘ಗೃಹ ಜ್ಯೋತಿ’ ಯೋಜನೆಗೆ ಗುರುವಾರ ಸಂಜೆಯವರೆಗೆ ಒಟ್ಟು 20.10 ಲಕ್ಷ ಗ್ರಾಹಕರು ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ.
ಜೂನ್ 18ರಂದು ನೋಂದಣಿ ಪ್ರಾರಂಭವಾಗಿತ್ತು. ಅಂದು 96,305, ಸೋಮವಾರ 3,34,845, ಮಂಗಳವಾರ 4,64,225, ಬುಧವಾರ 5,25,953 ಗ್ರಾಹಕರು ನೋಂದಣಿ ಮಾಡಿದ್ದರು. ಗುರುವಾರ ಸಂಜೆಯ ವೇಳೆಗೆ 5,89,158 ಲಕ್ಷ ಗ್ರಾಹಕರು ಕರ್ನಾಟಕ ಒನ್, ಬೆಂಗಳೂರು ಒನ್ ಹಾಗೂ ಗ್ರಾಮ ಒನ್ ಅಲ್ಲದೇ, ಕಂಪ್ಯೂಟರ್, ಲ್ಯಾಪ್‌ಟಾಪ್, ಮೊಬೈಲ್ ಫೋನ್‌ಗಳಲ್ಲಿ ಹಾಗೂ ಕೆಲವು ವಿದ್ಯುತ್ ಕಚೇರಿಗಳಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.