ADVERTISEMENT

ವಿಧಾನ ಪರಿಷತ್ತಿಗೆ ಅವಿರೋಧ ಆಯ್ಕೆ

​ಪ್ರಜಾವಾಣಿ ವಾರ್ತೆ
Published 22 ಜೂನ್ 2020, 19:45 IST
Last Updated 22 ಜೂನ್ 2020, 19:45 IST
ವಿಧಾನ ಸೌಧ- ಸಾಂದರ್ಭಿಕ ಚಿತ್ರ
ವಿಧಾನ ಸೌಧ- ಸಾಂದರ್ಭಿಕ ಚಿತ್ರ   

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಏಳೂ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬಿಜೆಪಿಯ ಎಂ.ಟಿ.ಬಿ.ನಾಗರಾಜ್‌, ಪ್ರತಾಪ ಸಿಂಹ ನಾಯಕ್, ಆರ್‌.ಶಂಕರ್, ಸುನೀಲ್ ವಲ್ಯಾಪುರೆ, ಕಾಂಗ್ರೆಸ್‌ನ ನಜೀರ್‌ ಅಹ್ಮದ್, ಬಿ.ಕೆ.ಹರಿಪ್ರಸಾದ್‌ ಮತ್ತು ಜೆಡಿಎಸ್‌ನ ಗೋವಿಂದರಾಜ್‌ ಅವಿರೋಧ ಆಯ್ಕೆಯಾದವರು.

ನಾಮಪತ್ರ ಹಿಂದಕ್ಕೆ ಪಡೆಯಲು ಸೋಮವಾರ ಕಡೆಯ ದಿನವಾಗಿತ್ತು. ಬೇರೆ ಯಾವುದೇ ಅಭ್ಯರ್ಥಿ ಚುನಾವಣಾ ಕಣದಲ್ಲಿ ಉಳಿದಿರಲಿಲ್ಲ. ಹೀಗಾಗಿ ಏಳೂ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ ಎಂದು ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆ ಕಾರ್ಯ
ದರ್ಶಿ ಎಂ.ಕೆ.ವಿಶಾಲಾಕ್ಷಿ ಪ್ರಕಟಿಸಿದರು.

ADVERTISEMENT

ಇವರ ಪೈಕಿ ನಜೀರ್‌ ಪುನರಾಯ್ಕೆ ಆಗುತ್ತಿದ್ದು, ನಾಗರಾಜ್, ಶಂಕರ್, ಸುನೀಲ್‌ ಈ ಹಿಂದೆ ವಿಧಾನಸಭೆ ಸದಸ್ಯರಾಗಿದ್ದವರು. ಹರಿಪ್ರಸಾದ್ ರಾಜ್ಯಸಭೆ ಸದಸ್ಯರಾಗಿದ್ದವರು. ನಾಯಕ್, ಗೋವಿಂದರಾಜ್ ಅವರು ಶಾಸನಸಭೆಗೆ ಮೊದಲ ಬಾರಿಗೆ ಪ್ರವೇಶಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.