ADVERTISEMENT

ಲಸಿಕೆಗೆ ಪಡೆದವರಿಗೆ ‘ಗ್ರೀನ್ ಪಾಸ್‌’ ನೀಡಲು ಚಿಂತನೆ: ಆರೋಗ್ಯ ಸಚಿವ ಸುಧಾಕರ್

​ಪ್ರಜಾವಾಣಿ ವಾರ್ತೆ
Published 7 ಜನವರಿ 2022, 20:14 IST
Last Updated 7 ಜನವರಿ 2022, 20:14 IST
ಡಾ.ಕೆ. ಸುಧಾಕರ್‌
ಡಾ.ಕೆ. ಸುಧಾಕರ್‌   

ಬೆಂಗಳೂರು: ಎರಡು ಡೋಸ್‌ ಲಸಿಕೆ ಪಡೆದವರು ಸರ್ಕಾರಿ ಕಚೇರಿಗಳು, ಮಾಲ್‌, ಚಿತ್ರಮಂದಿರ, ಹೊಟೇಲ್, ಪಬ್‌, ಕ್ಲಬ್‌ ಮುಂತಾದೆಡೆ ಬಳಸಲು ‘ಗ್ರೀನ್‌ ಪಾಸ್‌’ ಅಥವಾ ‘ಯೂನಿವರ್ಸಲ್‌ ಪಾಸ್‌’ ನೀಡುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಹೇಳಿದರು.

ಈ ಬಗ್ಗೆ ಕೋವಿಡ್‌ ತಾಂತ್ರಿಕ ಸಮಿತಿ ಮತ್ತು ಐಟಿ ಕಂಪನಿಗಳ ಜತೆ ಸಮಾಲೋಚನೆ ನಡೆಸಲಾಗುತ್ತಿದೆ. ಇದರಿಂದ ಕೋವಿಡ್‌ ನಿಯಂತ್ರಣಕ್ಕೆ ಅನುಕೂಲವಾಗಲಿದೆ ಎಂದು ತಿಳಿಸಿದರು. ಹೊರ ರಾಜ್ಯಗಳಿಂದ ರೈಲುಗಳಲ್ಲಿ ಬರುವ ಪ್ರಯಾಣಿಕರು ಕೋವಿಡ್‌ ಪರೀಕ್ಷೆ ಮಾಡಿಸಿ ನೆಗೆಟಿವ್ ವರದಿ ಕಡ್ಡಾಯವಾಗಿ ತರುವ ಬಗ್ಗೆ ಆದೇಶ ಹೊರಡಿಸಲು ರೈಲ್ವೆ ಸಚಿವರಿಗೆ ಪತ್ರ ಬರೆಯಲು ನಿರ್ಧರಿಸಲಾಗಿದೆ ಎಂದರು.

ಕೋವಿಡ್‌ ಕುರಿತು ಸಾಮಾಜಿಕ ಜಾಲತಾಣ ಮತ್ತಿತರ ಮಾಧ್ಯಮಗಳ ಮೂಲಕ ತಪ್ಪು ಸಂದೇಶಗಳನ್ನು ಹರಿಬಿಟ್ಟರೆ ಕಠಿಣ ಶಿಕ್ಷೆಗೆ ಒಳಪಡಿಸಲಾಗುವುದು ಎಂದೂ ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.