ADVERTISEMENT

ಹಿಂದಿನ ಬಿಜೆಪಿ ಸರ್ಕಾರದ ಎಲ್ಲಾ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡುವುದನ್ನು ತಡೆದ ಸರ್ಕಾರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ಮೇ 2023, 13:57 IST
Last Updated 22 ಮೇ 2023, 13:57 IST
ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ    

ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಎಲ್ಲ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡುವುದನ್ನು ಸರ್ಕಾರ ಸೋಮವಾರ ತಡೆ ಹಿಡಿದಿದೆ. ಜತೆಗೆ ಆರಂಭವಾಗದೇ ಇರುವ ಕಾಮಗಾರಿಗಳನ್ನೂ ತಡೆಯುವಂತೆ ಎಲ್ಲ ಇಲಾಖೆಗಳಿಗೆ ಸೂಚಿಸಲಾಗಿದೆ.

ಈ ಸಂಬಂಧ ಆರ್ಥಿಕ ಇಲಾಖೆಯ ಕಾರ್ಯದರ್ಶಿ ಏಕರೂಪ್‌ ಕೌರ್‌ ಅವರು ಸುತ್ತೋಲೆ ಹೊರಡಿಸಿದ್ದಾರೆ.

ಈ ಹಿಂದಿನ ಸರ್ಕಾರ ಕೈಗೊಂಡಿದ್ದ ಎಲ್ಲಾ ಇಲಾಖೆಗಳ, ನಿಗಮ, ಮಂಡಳಿ, ಪ್ರಾಧಿಕಾರಗಳ ಕಾಮಗಾರಿಗಳಿಗೆ ಹಣ ಬಿಡುಗಡೆ ಮತ್ತು ಪಾವತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆ ಹಿಡಿಯಲು ಹಾಗೂ ಪ್ರಾರಂಭವಾಗದಿರುವ ಎಲ್ಲಾ ಕಾಮಗಾರಿಗಳನ್ನು ತಡೆ ಹಿಡಿಯಲು ಸುತ್ತೋಲೆಯಲ್ಲಿ ಸೂಚಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.