ಎಚ್.ಡಿ. ಕುಮಾರಸ್ವಾಮಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬ ಮೈಸೂರಿನ ‘ಮುಡಾ’ದಲ್ಲಿ ಪಡೆದ ಬದಲಿ ನಿವೇಶನಗಳ ಹಗರಣವನ್ನು ಬಯಲಿಗೆಳೆದ ಆರ್‌ಟಿಐ ಕಾರ್ಯಕರ್ತರಿಗೆ ರಾಜ್ಯ ಸರ್ಕಾರ ಕಿರುಕುಳ ನೀಡುತ್ತಿದೆ ಎಂದು ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಹಗರಣ ಪ್ರಶ್ನಿಸಿದ ವಿರೋಧ ಪಕ್ಷಗಳನ್ನು ವಿಧಾನಮಂಡಲದಲ್ಲಿ ಹತ್ತಿಕ್ಕಲಾಯಿತು. ಸತ್ಯಶೋಧನೆಯಲ್ಲಿ ನಿರತರಾದ ಆರ್‌ಟಿಐ ಕಾರ್ಯಕರ್ತರನ್ನು ಅಧಿಕಾರ ದುರ್ಬಳಕೆ ಮಾಡಿಕೊಂಡು ದಮನ ಮಾಡಲಾಗುತ್ತಿದೆ. ಆರೋಪಿ ಸ್ಥಾನದಲ್ಲಿರುವ ಮುಖ್ಯಮಂತ್ರಿ ಪರಿವಾರವನ್ನು ರಕ್ಷಿಸಲು ಕಾಂಗ್ರೆಸ್ ಮುಖಂಡರು ಆರ್‌ಟಿಐ ಕಾರ್ಯಕರ್ತರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಟೀಕಿಸಿದ್ದಾರೆ.
ಪೊಲೀಸ್ ಬಲ ಬಳಸಿಕೊಂಡು ಸತ್ಯದ ಕತ್ತು ಹಿಚುಕಲು ಸಾಧ್ಯವಿಲ್ಲ. ಕಾಂಗ್ರೆಸ್ ಮುಖಂಡರು ಪೊಲೀಸರಿಗೆ ನೀಡಿದ ದೂರಿನಲ್ಲೇ ಹಗರಣ ಒಪ್ಪಿಕೊಂಡಂತೆ ಭಾಸವಾಗುತ್ತಿದೆ. ಇಂತಹ ವ್ಯರ್ಥ ಕೆಲಸವನ್ನು ಬಿಟ್ಟು ಸತ್ಯ ಹೇಳಿದರೆ ಮುಖ್ಯಮಂತ್ರಿಯಾದವರಿಗೆ ಶೋಭೆ ತರುತ್ತದೆ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.