ADVERTISEMENT

ರಜೆ ನಗದೀಕರಣ ವಿಳಂಬ: ಬಡ್ಡಿ ಪಾವತಿಗೆ ಹೈಕೋರ್ಟ್ ಆದೇಶ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2024, 15:56 IST
Last Updated 4 ಸೆಪ್ಟೆಂಬರ್ 2024, 15:56 IST
<div class="paragraphs"><p>ಹೈಕೋರ್ಟ್ </p></div>

ಹೈಕೋರ್ಟ್

   

ಬೆಂಗಳೂರು: ‘ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ನಿವೃತ್ತ ನೌಕರರ ಗಳಿಕೆ ರಜೆ ನಗದೀಕರಣ ವಿಳಂಬವಾಗಿರುವ ಹಿನ್ನೆಲೆಯಲ್ಲಿ ಅದರ ಮೇಲಿನ ಬಡ್ಡಿ ಮೊತ್ತವನ್ನು ಮೂರು ತಿಂಗಳಲ್ಲಿ ಪಾವತಿಸಬೇಕು’ ಎಂದು ಹೈಕೋರ್ಟ್ ಆದೇಶಿಸಿದೆ.

ಈ ಸಂಬಂಧ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ನಿವೃತ್ತ ನೌಕರರ ಕ್ಷೇಮಾಭಿವೃದ್ದಿ ಸಂಘದ ಜಂಟಿ ಕಾರ್ಯದರ್ಶಿ ಬಿ.ಎಸ್.ಗುರುಸ್ವಾಮಿ ಹಾಗೂ ಇತರ 20 ನಿವೃತ್ತ ನೌಕರರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ನಟರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಈ ಕುರಿತಂತೆ ಆದೇಶಿಸಿದೆ.

ADVERTISEMENT

ವಿಚಾರಣೆ ವೇಳೆ ಕೈಮಗ್ಗ ಅಭಿವೃದ್ಧಿ ನಿಗಮದ ಪರ ವಕೀಲರು ಹಾಜರಾಗಿ, ಗಳಿಕೆ ರಜೆ ನಗದೀಕರಣ ವಿಳಂಬಾಗಿರುವ ಹಿನ್ನೆಲೆಯಲ್ಲಿ ಅದರ ಮೇಲೆ ಬಡ್ಡಿ ಪಾವತಿಸುವುದಕ್ಕೆ ನಿಗಮದ ಸಮ್ಮತಿ ಇದೆ ಎಂದರು.

ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ‘ಅರ್ಜಿದಾರರಾಗಿರುವ ನಿಗಮದ ನಿವೃತ್ತ ನೌಕರರಿಗೆ ಅವರ ರಜೆ ನಗದೀಕರಣ ಬಿಡುಗಡೆ ಮಾಡಲು ವಿಳಂಬ ಆಗಿರುವುದಕ್ಕೆ ಶೇ 8ರಂತೆ ಮೂರು ತಿಂಗಳಲ್ಲಿ ಬಡ್ಡಿ ಪಾವತಿಸಬೇಕು’ ಎಂದು ಆದೇಶಿಸಿ ಅರ್ಜಿ ವಿಲೇವಾರಿ ಮಾಡಿತು. ಅರ್ಜಿದಾರರ ಪರ ವಕೀಲ ಎಚ್.ಸಿ.ಸುಂದರೇಶ ವಾದ ಮಂಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.