ADVERTISEMENT

ಸಚಿವ ಸುಧಾಕರ್ ಸೂಚನೆ: ಚಿಕ್ಕಬಳ್ಳಾಪುರದ ರೋಗಿಗಳಿಗೆ ಶೇ 15ರಷ್ಟು ಹಾಸಿಗೆ ಮೀಸಲು

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2021, 15:06 IST
Last Updated 30 ಏಪ್ರಿಲ್ 2021, 15:06 IST
ಡಾ.ಕೆ.ಸುಧಾಕರ್
ಡಾ.ಕೆ.ಸುಧಾಕರ್   

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಬರುವ ಕೋವಿಡ್–19 ರೋಗಿಗಳಿಗೆ ಬೆಂಗಳೂರಿನ ಹೆಬ್ಬಾಳದ ಕೊಲಂಬಿಯಾ ಏಷ್ಯಾ ಆಸ್ಪತ್ರೆ, ಬ್ಯಾಪ್ಟಿಸ್ಟ್ ಆಸ್ಪತ್ರೆ ಹಾಗೂ ಸಹಕಾರ ನಗರದ ಆಸ್ಟರ್ ಸಿಎಂಸಿ ಆಸ್ಪತ್ರೆಯಲ್ಲಿ ಸರ್ಕಾರಿ ಕೋಟಾದಡಿ ಶೇ 15ರಷ್ಟು ಹಾಸಿಗೆಗಳನ್ನು ಮೀಸಲಿಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರು ಆದೇಶಿಸಿದ್ದಾರೆ.

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರ ಮೌಖಿಕ ಆದೇಶದ ಹಿನ್ನೆಲೆಯಲ್ಲಿ ಈ ಕ್ರಮವಹಿಸಲಾಗಿದೆ.

ಕೋವಿಡ್ ಎರಡನೇ ಅಲೆ ತೀವ್ರವಾಗಿ ಹೆಚ್ಚುತ್ತಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈಗಾಗಲೇ ಜಿಲ್ಲಾ ಕೋವಿಡ್ ಆಸ್ಪತ್ರೆ ಮತ್ತು ಕೋವಿಡ್ ಆರೋಗ್ಯ ಕೇಂದ್ರಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಪ್ರಮಾಣದಲ್ಲಿ ಸೋಂಕು ಹೆಚ್ಚಳವಾಗಲಿದೆ. ರೋಗಗಳಿಗೆ ಚಿಕಿತ್ಸೆ ಮತ್ತು ಮರಣ ಪ್ರಮಾಣ ಇಳಿಸುವ ನಿಟ್ಟಿನಲ್ಲಿ ಚಿಕ್ಕಬಳ್ಳಾಪುರದಿಂದ ಶಿಫಾರಸ್ಸಾಗುವ ಕೋವಿಡ್ ರೋಗಿಗಳಿಗೆ ಈ ಆಸ್ಪತ್ರೆಗಳಲ್ಲಿ ಹಾಸಿಗೆಗಳನ್ನು ಮೀಸಲಿಡಬೇಕು ಎಂದು ಆದೇಶಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.