ADVERTISEMENT

ವಿಕ್ಟೊರಿಯಾ ಆಸ್ಪತ್ರೆಗೆ ಆರೋಗ್ಯ ಸಚಿವ ಸುಧಾಕರ್ ಭೇಟಿ: ಸಿದ್ಧತೆ ಪರಿಶೀಲನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ಜನವರಿ 2022, 9:19 IST
Last Updated 14 ಜನವರಿ 2022, 9:19 IST
ಚಿತ್ರ ಕೃಪೆ – ಸುಧಾಕರ್ ಟ್ವೀಟ್
ಚಿತ್ರ ಕೃಪೆ – ಸುಧಾಕರ್ ಟ್ವೀಟ್   

ಬೆಂಗಳೂರು: ಆರೋಗ್ಯ ಸಚಿವ ಕೆ.ಸುಧಾಕರ್ ಅವರು ಶುಕ್ರವಾರ ಬೆಂಗಳೂರಿನ ವಿಕ್ಟೊರಿಯಾ ಆಸ್ಪತ್ರೆಗೆ ಭೇಟಿ ನೀಡಿ ಕೋವಿಡ್–19 ಸೋಂಕಿತರ ಚಿಕಿತ್ಸೆಗೆ ಮಾಡಲಾಗಿರುವ ಸಿದ್ಧತೆ ಹಾಗೂ ಕೋವಿಡ್ ಲಸಿಕೆಯ ಮುನ್ನೆಚ್ಚರಿಕಾ ಡೋಸ್ ವಿತರಣೆಯ ಪ್ರಗತಿ ಪರಿಶೀಲಿಸಿದರು.

ಈ ಕುರಿತು ಟ್ವೀಟ್ ಮಾಡಿರುವ ಅವರು, ವಿಕ್ಟೊರಿಯಾ ಆಸ್ಪತ್ರೆಗೆ ಭೇಟಿ ನೀಡಿ ಕೊರೊನಾ ಲಸಿಕೆಯ ಮುಂಜಾಗ್ರತಾ ಡೋಸ್ ವಿತರಣೆಯ ಪ್ರಗತಿ ಹಾಗೂ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಕೈಗೊಂಡಿರುವ ಸಿದ್ಧತೆಗಳನ್ನು ಪರಿಶೀಲಿಸಲಾಯಿತು ಎಂದು ಉಲ್ಲೇಖಿಸಿದ್ದಾರೆ.

ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರು ಪಿಎಂಎಸ್ಎಸ್‌ವೈ ಆಸ್ಪತ್ರೆಗೆ ಭೇಟಿ ನೀಡಿ ಮುಂಜಾಗ್ರತಾ ಡೋಸ್ ಪಡೆದುಕೊಂಡರು ಎಂದೂ ಸುಧಾಕರ್ ತಿಳಿಸಿದ್ದಾರೆ.

ಕೋವಿಡ್ ಮೂರನೇ ಅಲೆಯು ಈ ಹಿಂದಿನ ಎರಡೂ ಅಲೆಗಳಿಗಿಂತ ವೇಗವಾಗಿದೆ ಎಂದಿರುವ ಸಚಿವರು, ಮೊದಲ ಅಲೆ, ಎರಡನೇ ಅಲೆ ಹಾಗೂ ಮೂರನೇ ಅಲೆಯ ಸಂದರ್ಭದಲ್ಲಿ ಪ್ರಕರಣಗಳು ಹೆಚ್ಚಾದ ಅಂಕಿಅಂಶಗಳ ಪಟ್ಟಿಯನ್ನು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.