ADVERTISEMENT

ರಾಜ್ಯದಲ್ಲಿ ಹೈಕೋರ್ಟ್‌ ಸೇರಿ ಎಲ್ಲ ನ್ಯಾಯಾಲಯಗಳಿಗೆ ಏ.30ರವರೆಗೆ ರಜೆ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2020, 15:07 IST
Last Updated 13 ಏಪ್ರಿಲ್ 2020, 15:07 IST
   

ಬೆಂಗಳೂರು: ಹೈಕೋರ್ಟ್ ಸೇರಿದಂತೆ ರಾಜ್ಯದ ಎಲ್ಲ ನ್ಯಾಯಾಲಯಗಳ ರಜೆಯನ್ನು ಇದೇ 30ರವರೆಗೆ ವಿಸ್ತರಿಸಲಾಗಿದೆ.

"ವಿಚಾರಣಾ ನ್ಯಾಯಾಲಯ, ಜಿಲ್ಲಾ, ಕಾರ್ಮಿಕ, ಕೌಟುಂಬಿಕ ಮತ್ತು ಕೈಗಾರಿಕಾ ನ್ಯಾಯಮಂಡಳಿಗಳಿಗೆ ಈ ರಜೆ ವಿಸ್ತರಿಸಲಾಗಿದೆ" ಎಂದು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ರಾಜೇಂದ್ರ ಬದಾಮಿಕರ ಅವರು ಸೋಮವಾರ ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

"ತುರ್ತು ಪ್ರಕರಣಗಳನ್ನು ವಿಡಿಯೊ ಕಾನ್ಫರೆನ್ಸ್ ಮುಖಾಂತರ ವಿಚಾರಣೆ ನಡೆಸಲು ಅವಕಾಶ ಕಲ್ಪಿಸಲಾಗಿದೆ" ಎಂದು ತಿಳಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.