ADVERTISEMENT

ಬಿಕ್ಲು ಶಿವು ಹತ್ಯೆ: ಕೋಕಾ ಕಾಯ್ದೆ ಪ್ರಶ್ನಿಸಿ ಅರ್ಜಿ ಸಲ್ಲಿಸಿದ ಬೈರತಿ ಬಸವರಾಜ್‌

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2025, 15:57 IST
Last Updated 16 ಅಕ್ಟೋಬರ್ 2025, 15:57 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ರೌಡಿಶೀಟರ್‌ ಶಿವಪ್ರಕಾಶ್‌ ಅಲಿಯಾಸ್‌ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ‘ಕರ್ನಾಟಕ ರಾಜ್ಯ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ’ಯ (ಕೋಕಾ) ನಿಯಮಗಳನ್ನು ಹೇರಿರುವ ಪೊಲೀಸರ ಕ್ರಮವನ್ನು ರದ್ದುಪಡಿಸುವಂತೆ ಕೋರಿ ಪ್ರಕರಣದ 5ನೇ ಆರೋಪಿಯಾದ ಕೆ.ಆರ್‌.ಪುರದ ಬಿಜೆಪಿ ಶಾಸಕ ಬೈರತಿ ಬಸವರಾಜ್‌ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಕೋಕಾ ಕಾಯ್ದೆಯ ಕಲಂ 3 (ಸಂಘಟಿತ ಅಪರಾಧ ಕೃತ್ಯ ಎಸಗಿ, ಜೀವಹಾನಿ ಮಾಡಿರುವರಿಗೆ ₹1 ಲಕ್ಷ ದಂಡದೊಂದಿಗೆ ಗರಿಷ್ಠ ಮರಣ ದಂಡನೆ ಅಥವಾ ಜೀವಾವಧಿ ಶಿಕ್ಷೆ ವಿಧಿಸುವ) ಮತ್ತು ಕಲಂ 4 (ಸಂಘಟಿತ ಅಪರಾಧ ಸಿಂಡಿಕೇಟ್ ಸದಸ್ಯರ ಪರವಾಗಿ ಲೆಕ್ಕಕ್ಕೆ ಸಿಗದ ಸಂಪತ್ತನ್ನು ಹೊಂದಿರುವುದಕ್ಕೆ) ಅನ್ನು ಹೇರಲು ಸಿಐಡಿ ಉಪ ಅಧೀಕ್ಷಕರಿಗೆ ಅನುಮತಿ ನೀಡಿ ಸಿಐಡಿ ಪೊಲೀಸ್‌ ಮಹಾ ನಿರ್ದೇಶಕರು 2025ರ ಆಗಸ್ಟ್ 12ರಂದು ಆದೇಶ ಹೊರಡಿಸಿದ್ದರು.

ಈ ಆದೇಶವನ್ನು ಅರ್ಜಿದಾರ ಬೈರತಿ ಬಸವರಾಜ್‌ ಪ್ರಶ್ನಿಸಿದ್ದು, ನ್ಯಾಯಮೂರ್ತಿ ಎಸ್‌.ಸುನೀಲ್‌ ದತ್‌ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಅರ್ಜಿ ವಿಚಾರಣೆಯನ್ನು ಇದೇ 23ಕ್ಕೆ ಮುಂದೂಡಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.