ADVERTISEMENT

ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು: ಹೈಕೋರ್ಟ್ ತೀರ್ಪು

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2026, 10:10 IST
Last Updated 16 ಫೆಬ್ರುವರಿ 2026, 10:10 IST
   

ಬೆಂಗಳೂರು: ಚುನಾವಣಾ ಅಕ್ರಮಗಳ ಹಿನ್ನೆಲೆಯಲ್ಲಿ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ.

ಇದೇ ವೇಳೆ ಪರಾಜಿತ ಬಿಜೆಪಿ ಅಭ್ಯರ್ಥಿ ಸಿ.ಮುನಿರಾಜು ಅವರನ್ನು ವಿಜಯಿ ಎಂದು ಘೋಷಿಸಲು ಏಕಸದಸ್ಯ ನ್ಯಾಯಪೀಠ ನಿರಾಕರಿಸಿದೆ. ಅಸಿಂಧುಗೊಳಿಸಿದ ಆದೇಶವನ್ನು ಚುನಾವಣಾ ಆಯೋಗಕ್ಕೆ ಮತ್ತು ವಿಧಾನಸಭೆ ಕಾರ್ಯದರ್ಶಿಗೆ ರವಾನಿಸಲು ಆದೇಶಿಸಲಾಗಿದೆ.

ಪರಾಜಿತ ಬಿಜೆಪಿ ಅಭ್ಯರ್ಥಿ ಸಿ.ಮುನಿರಾಜು ಅವರು ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಕೋರಿ ಹೈಕೋರ್ಟ್‌ಗೆ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.