ADVERTISEMENT

KPSC: 362 ಅಭ್ಯರ್ಥಿಗಳ ನೇಮಕಾತಿ ಸಿಂಧು –ಕಾಯ್ದೆ ಪ್ರಶ್ನಿಸಿದ್ದ ಪಿಐಎಲ್ ವಜಾ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2022, 7:24 IST
Last Updated 21 ಏಪ್ರಿಲ್ 2022, 7:24 IST
   

ಬೆಂಗಳೂರು:2011ನೇ ಸಾಲಿನ 362 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ನೇಮಕಾತಿ ಸಿಂಧುಗೊಳಿಸಿ ಅವರಿಗೆ ನೇಮಕಾತಿ ಆದೇಶ ನೀಡಲು ತರಲಾದ ಕಾಯ್ದೆಯನ್ನು ಪ್ರಶ್ನಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಹೈಕೋರ್ಟ್ ವಜಾಗೊಳಿಸಿದೆ.

ಈ ಕುರಿತಂತೆ ಸಾಮಾಜಿಕ ಕಾರ್ಯಕರ್ತ ಅರೀಫ್ ಜಮಾಲ್ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

'ಈಗಾಗಲೇ 2011ನೇ ಸಾಲಿನ ನೇಮಕಾತಿಯನ್ನು ಹೈಕೋರ್ಟ್ ಈ ಹಿಂದೆ ರದ್ದುಪಡಿಸಿದೆ ಎಂಬ ಹಿನ್ನೆಲೆಯಲ್ಲಿ ಇಡೀ ಕಾಯ್ದೆಯನ್ನು ಅಸಾಂವಿಧಾನಿಕ ಎನ್ನಲಾಗದು.‌ ಕಾಯ್ದೆಯಲ್ಲಿ ಯಾವ ನಿಯಮಗಳು ಅಸಾಂವಿಧಾನಿಕ ಎಂಬುದನ್ನು ಅರ್ಜಿದಾರರು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡುವಲ್ಲಿ ವಿಫಲರಾಗಿದ್ದಾರೆ'ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ, ಅರ್ಜಿ ವಜಾಗೊಳಿಸಿ ಆದೇಶಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.