ADVERTISEMENT

ಕೋವಿಡ್ ನಿಯಮ ಉಲ್ಲಂಘನೆ: ಸಚಿವ ಚಲುವರಾಯ ಸ್ವಾಮಿ ವಿರುದ್ಧದ ಪ್ರಕರಣ ರದ್ದು

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2023, 16:31 IST
Last Updated 7 ಆಗಸ್ಟ್ 2023, 16:31 IST
   

ಬೆಂಗಳೂರು: ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆ ಜಾರಿಗೆ ಆಗ್ರಹಿಸಿ ನಡೆಸಲಾದ ಪಾದಯಾತ್ರೆ ವೇಳೆ ಕೋವಿಡ್ ನಿಯಮ ಉಲ್ಲಂಘಿಸಿದ ಆರೋಪದಡಿ ಈಗಿನ ಕೃಷಿ ಸಚಿವ ಎನ್. ಚಲುವರಾಯ ಸ್ವಾಮಿ ವಿರುದ್ಧ ಕನಕಪುರ ತಾಲ್ಲೂಕಿನ ಐಜೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ 42ನೇ ಎಸಿಎಂಎಂ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ರದ್ದುಪಡಿಸುವಂತೆ ಕೋರಿ ಚಲುವರಾಯ ಸ್ವಾಮಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಾನ್ಯ ಮಾಡಿದೆ.

ಇದೇ ಆರೋಪದಡಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಐಜೂರು ಠಾಣಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್ ಅನ್ನು ಹೈಕೋರ್ಟ್ ಈ ಹಿಂದೆ ರದ್ದುಪಡಿಸಿತ್ತು. ಇ

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.