ADVERTISEMENT

ಶಿಯೊಮಿ: ಮಧ್ಯಂತರ ತಡೆ ಮುಂದುವರಿಕೆ

​ಪ್ರಜಾವಾಣಿ ವಾರ್ತೆ
Published 23 ಮೇ 2022, 17:05 IST
Last Updated 23 ಮೇ 2022, 17:05 IST
   

ಬೆಂಗಳೂರು: ಶಿಯೊಮಿ ಇಂಡಿಯಾ ಕಂಪನಿಗೆ ಸೇರಿದ ನಾಲ್ಕು ಬ್ಯಾಂಕ್‌ ಖಾತೆಗಳಲ್ಲಿನ ₹ 5,551.27 ಕೋಟಿ ಮೊತ್ತವನ್ನು ಜಪ್ತಿ ಮಾಡಬೇಕೆಂಬ ಜಾರಿ ನಿರ್ದೇಶನಾಲಯದ (ಇಡಿ) ಆದೇಶಕ್ಕೆ ನೀಡಿರುವ ಮಧ್ಯಂತರ ತಡೆಯನ್ನು ಹೈಕೋರ್ಟ್‌ ಮುಂದುವರಿಸಿದೆ.

ಶಿಯೊಮಿ ಕಂಪನಿ ಕಚೇರಿಯ ಪ್ರತಿನಿಧಿ ಸಮೀರ್‌ ಬಿ.ಎಸ್‌. ರಾವ್‌ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌.ಜಿ.ಪಂಡಿತ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ಈ ಹಿಂದಿನ ಆದೇಶವನ್ನು ಜೂನ್‌ 1ರವರೆಗೂ ಮುಂದುವರಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿದೆ.

ಏನಿದು ಪ್ರಕರಣ?: ‘ಶಿಯೊಮಿ ಇಂಡಿಯಾ ಕಂಪನಿಯು,ಭಾರತದಲ್ಲಿ ಗಳಿಸಿದ ಹಣವನ್ನು ರಾಯಧನ ನೀಡುವ ನೆಪದಲ್ಲಿವಿದೇಶಿ ಕಂಪನಿಗಳಿಗೆ ಅಕ್ರಮವಾಗಿ ವರ್ಗಾವಣೆ ಮಾಡುತ್ತಿದೆ. ಆದ್ದರಿಂದ, ಇದು ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) 1999ರ ನಿಯಮಗಳ ಉಲ್ಲಂಘನೆ’ ಎಂಬುದು ಇ.ಡಿ ಆರೋಪ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.