ನವದೆಹಲಿ: ಕರ್ನಾಟಕ ಹೈಕೋರ್ಟ್‌ಗೆ ಇಬ್ಬರು ನ್ಯಾಯಮೂರ್ತಿಗಳನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದೆ.
ಕೇರಳ ಹೈಕೋರ್ಟ್‌ನ ದಿನೇಶ್ ಕುಮಾರ್ ಸಿಂಗ್, ಅಲಹಾಬಾದ್ ಹೈಕೋರ್ಟ್‌ನ ಜಯಂತ್ ಬ್ಯಾನರ್ಜಿ ಅವರನ್ನು ಕರ್ನಾಟಕ ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಗಿದೆ. ಕರ್ನಾಟಕ ಹೈಕೋರ್ಟ್‌ನಿಂದ ನ್ಯಾಯಮೂರ್ತಿಗಳಾದ ವಿ.ಕಾಮೇಶ್ವರ ರಾವ್ ಅವರನ್ನು ದೆಹಲಿ ಹೈಕೋರ್ಟ್‌ಗೆ ವರ್ಗಾಯಿಸಲಾಗಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತೃತ್ವದ ಐವರು ನ್ಯಾಯಮೂರ್ತಿಗಳ ಕೊಲಿಜಿಯಂ ವಿವಿಧ ಹೈಕೋರ್ಟ್‌ಗಳ ನ್ಯಾಯಮೂರ್ತಿಗಳ ವರ್ಗಾವಣೆಗೆ ಮೇ ತಿಂಗಳಲ್ಲಿ ಶಿಫಾರಸು ಮಾಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.