ADVERTISEMENT

ಹೈಕೋರ್ಟ್‌ಗೆ ಹಂಗಾಮಿ ಸಿಜೆ ಅಲೋಕ್ ಆರಾಧೆ

​ಪ್ರಜಾವಾಣಿ ವಾರ್ತೆ
Published 30 ಜೂನ್ 2022, 19:36 IST
Last Updated 30 ಜೂನ್ 2022, 19:36 IST
ಅಲೋಕ್ ಆರಾಧೆ
ಅಲೋಕ್ ಆರಾಧೆ   

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ಅವರು ಜುಲೈ 2ರಂದು ನಿವೃತ್ತಿಯಾಗುತ್ತಿದ್ದು, ಹಿರಿಯ ನ್ಯಾಯಮೂರ್ತಿ ಅಲೋಕ್ ಆರಾಧೆ ಅವರನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಲಾಗಿದೆ.

ಈ ಕುರಿತು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯ ಗುರುವಾರ ಅಧಿಸೂಚನೆ ಹೊರಡಿಸಿದೆ.

ಅಲೋಕ್ ಆರಾಧೆ 2009ರಲ್ಲಿ ಮಧ್ಯಪ್ರದೇಶ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. 2018ರ ನವೆಂಬರ್ 17ರಂದು ಕರ್ನಾಟಕ ಹೈಕೋರ್ಟ್‌ಗೆ ವರ್ಗಾವಣೆಯಾಗಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.