ADVERTISEMENT

ಹೆಚ್ಚುತ್ತಿರುವ ಪ್ರಕರಣಗಳ ಸಂಖ್ಯೆ: ಹೈಕೋರ್ಟ್‌ನಲ್ಲಿ 226 ಹುದ್ದೆ ಸೃಜಿಸಿ ಆದೇಶ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2026, 15:27 IST
Last Updated 26 ಫೆಬ್ರುವರಿ 2026, 15:27 IST
<div class="paragraphs"><p>ಕರ್ನಾಟಕ ಹೈಕೋರ್ಟ್</p></div>

ಕರ್ನಾಟಕ ಹೈಕೋರ್ಟ್

   

ಬೆಂಗಳೂರು: ಹೈಕೋರ್ಟ್‌ನ ಬೆಂಗಳೂರಿನ ಪ್ರಧಾನ ಹಾಗೂ ಕಲಬುರಗಿ–ಧಾರವಾಡ ಪೀಠಗಳಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತ್ವರಿತ ವಿಲೇವಾರಿಗೆ ಅನುವಾಗುವಂತೆ 226 ಹುದ್ದೆಗಳನ್ನು ಸೃಜಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರಿನ ಪ್ರಧಾನ ಪೀಠಕ್ಕೆ 68, ಧಾರವಾಡಕ್ಕೆ 97 ಮತ್ತು ಕಲಬುರಗಿ ಪೀಠಕ್ಕೆ 61 ಹುದ್ದೆಗಳನ್ನು ಸೃಷ್ಟಿಸಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.

ADVERTISEMENT

‘ಹೈಕೋರ್ಟ್‌ನ ಬೆಂಗಳೂರು, ಧಾರವಾಡ ಮತ್ತು ಕಲಬುರಗಿ ಪೀಠಗಳಲ್ಲಿ ಹೆಚ್ಚಿನ ಪ್ರಕರಣಗಳು ಬಾಕಿ ಇವೆ. ಪ್ರತಿ ವರ್ಷ ಹೊಸದಾಗಿ ದಾಖಲಾಗುವ ಪ್ರಕರಣಗಳೂ ಹೆಚ್ಚುತ್ತಿವೆ. ಹಾಗಾಗಿ, ನ್ಯಾಯಪೀಠಗಳ ಕಾರ್ಯನಿರ್ವಹಣೆ ಕಷ್ಟಕರವಾಗಿದೆ. ಹಾಲಿ ಸಿಬ್ಬಂದಿಗೆ ಪ್ರಕರಣಗಳ ದಾಖಲಾತಿ, ವಿಲೇವಾರಿ, ಲೋಕ ಅದಾಲತ್‌ ಮತ್ತು ಮಧ್ಯಸ್ಥಿಕೆ ಚಟುವಟಿಕೆಗಳಿಂದಾಗಿ ಕೆಲಸದ ಹೊರೆ ಎದುರಾಗಿದೆ. ನಿಗದಿತ ಸಮಯದಲ್ಲಿ ಕಾರ್ಯ ನಿರ್ವಹಿಸುವುದು ಕಷ್ಟಕರವಾಗಿದೆ’ ಎಂದು ರಿಜಿಸ್ಟ್ರಾರ್‌ ಜನರಲ್‌ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.