ADVERTISEMENT

ಶಿಯೋಮಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 16 ಜೂನ್ 2022, 20:30 IST
Last Updated 16 ಜೂನ್ 2022, 20:30 IST
   

ಬೆಂಗಳೂರು: ಶಿಯೊಮಿ ಇಂಡಿಯಾ ಕಂಪನಿಗೆ ಸೇರಿದ ನಾಲ್ಕು ಬ್ಯಾಂಕ್‌ ಖಾತೆಗಳಲ್ಲಿನ ₹ 5,551.27 ಕೋಟಿ ಮೊತ್ತವನ್ನು ಜಪ್ತಿ ಮಾಡಬೇಕೆಂಬ ಜಾರಿ ನಿರ್ದೇಶನಾಲಯದ (ಇಡಿ) ಆದೇಶ ಪ್ರಶ್ನಿಸಿ ಸಲ್ಲಿಸಲಾಗಿರುವ ರಿಟ್‌ ಅರ್ಜಿಯ ಮೇಲಿನ ತೀರ್ಪನ್ನು ಹೈಕೋರ್ಟ್‌ ಕಾಯ್ದಿರಿಸಿದೆ.

ಇ.ಡಿ ಆದೇಶ ಪ್ರಶ್ನಿಸಿ ಬೆಂಗಳೂರಿನ ಮಾರತ್‌ ಹಳ್ಳಿಯ ಟೆಕ್‌ ಗ್ರಾಮದಲ್ಲಿರುವ ಶಿಯೊಮಿ ಕಂಪನಿ ಕಚೇರಿಯ ಅಧಿಕೃತ ಪ್ರತಿನಿಧಿ ಸಮೀರ್‌ ಬಿ.ಎಸ್‌.ರಾವ್‌ ಸಲ್ಲಿಸಿರುವ ರಿಟ್‌ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್‌.ಜಿ.ಪಂಡಿತ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ಪೂರ್ಣಗೊಳಿಸಿತು.

ಇ.ಡಿ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್‌ ಎಂ.ಬಿ.ನರಗುಂದ ಹಾಗೂ ಅರ್ಜಿದಾರರ ಪರ ಹಿರಿಯ ವಕೀಲ ಎಸ್.ಗಣೇಶನ್‌ ಅವರ ವಾದ–ಪ್ರತಿವಾದವನ್ನು ನ್ಯಾಯಪೀಠ ಆಲಿಸಿದೆ.

ADVERTISEMENT

ಏನಿದು ಪ್ರಕರಣ?: ‘ಶಿಯೊಮಿ ಇಂಡಿಯಾ ಕಂಪನಿಯು ಭಾರತದಲ್ಲಿ ಗಳಿಸಿದ ಹಣವನ್ನು ರಾಯಧನ ನೀಡುವ ನೆಪದಲ್ಲಿವಿದೇಶಿ ಕಂಪನಿಗಳಿಗೆ ಅಕ್ರಮವಾಗಿ ವರ್ಗಾವಣೆ ಮಾಡುತ್ತಿದೆ. ಆದ್ದರಿಂದ, ಇದು ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) 1999ರ ನಿಯಮಗಳ ಉಲ್ಲಂಘನೆ’ ಎಂಬುದು ಇ.ಡಿ ಆರೋಪ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.