ADVERTISEMENT

ಸಚಿವ ಸುಧಾಕರ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2023, 21:54 IST
Last Updated 10 ಫೆಬ್ರುವರಿ 2023, 21:54 IST
karnataka high court stay to k sudhakar case
karnataka high court stay to k sudhakar case   

ಬೆಂಗಳೂರು: ಚಿಕ್ಕಬಳ್ಳಾಪುರದ ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆಂಜನೇಯ ರೆಡ್ಡಿ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿ ದಂತೆ ಜನಪ್ರತಿನಿಧಿಗಳ

ವಿಶೇಷ ನ್ಯಾಯಾಲಯ ಜಾರಿಗೊಳಿಸಿದ್ದ ಸಮನ್ಸ್ ಪ್ರಶ್ನಿಸಿ ಸುಧಾಕರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ADVERTISEMENT

ವಿಚಾರಣೆ ವೇಳೆ ಸುಧಾಕರ್ ಪರ ಹಾಜರಾಗಿದ್ದ ಹಿರಿಯ ವಕೀಲ ಉದಯ ಹೊಳ್ಳ, ‘ಸಾರ್ವಜನಿಕ ಭಾಷಣದಲ್ಲಿ ಸುಧಾಕರ್‌ ಆಡಿದ್ದಾರೆ ಎನ್ನಲಾದ ಆಕ್ಷೇಪಾರ್ಹ ಮಾತುಗಳ ಬಗ್ಗೆ ಆಂಜನೇಯ ರೆಡ್ಡಿ ತಪ್ಪು ಕಲ್ಪನೆ ಹೊಂದಿದ್ದಾರೆ. ಭಾಷಣದಲ್ಲಿ ಎಲ್ಲಿಯೂ ಅವರ ಹೆಸರನ್ನು ಸುಧಾಕರ್ ಬಳಸಿಲ್ಲ. ಆದ್ದರಿಂದ, ಪ್ರಕರಣ ರದ್ದುಗೊಳಿಸಬೇಕು’ ಎಂದು ಕೋರಿದರು. ಮನವಿ ಮಾನ್ಯ ಮಾಡಿದ ನ್ಯಾಯಪೀಠ, ಪ್ರತಿವಾದಿಗಳಿಗೆ ನೋಟಿಸ್ ಜಾರಿಗೆ ಆದೇಶಿಸಿ ವಿಚಾರಣೆ ವಿಚಾರಣೆ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.