ADVERTISEMENT

ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ: ತೇಜಸ್ವಿ ಸೂರ್ಯ ವಿರುದ್ಧದ ವಿಚಾರಣೆಗೆ ತಡೆ

​ಪ್ರಜಾವಾಣಿ ವಾರ್ತೆ
Published 3 ಜನವರಿ 2022, 19:24 IST
Last Updated 3 ಜನವರಿ 2022, 19:24 IST
ತೇಜಸ್ವಿ ಸೂರ್ಯ
ತೇಜಸ್ವಿ ಸೂರ್ಯ   

ಬೆಂಗಳೂರು:ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಈ ಕುರಿತಂತೆ ಮ್ಯಾಜಿಸ್ಟ್ರೇಟ್ ಕೋರ್ಟ್ ಹೊರಡಿಸಿದ್ದ ಸಮನ್ಸ್ ಪ್ರಶ್ನಿಸಿ ತೇಜಸ್ವಿ ಸೂರ್ಯ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಎಸ್‌. ಸುನಿಲ್ ದತ್ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಶ್ರೀನಿವಾಸ ರಾವ್,‘ಇದೊಂದು ಪರಿಗಣನೆಗೆ ಅರ್ಹವಲ್ಲದ ಪ್ರಕರಣ. ಆದರೂ, ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಇದೇ 6ರಂದು ಅರ್ಜಿದಾರರ ಖುದ್ದು ಹಾಜರಾತಿಗೆ ಸಮನ್ಸ್ ಜಾರಿಗೊಳಿಸಿದೆ. ಪೊಲೀಸರು ಮತ್ತುಮ್ಯಾಜಿಸ್ಟ್ರೇಟ್ ಕೋರ್ಟ್ ನಿಯಮ ಪಾಲನೆ ಮಾಡಿಲ್ಲ. ಆದ್ದರಿಂದ, ಸಮನ್ಸ್‌ ಜಾರಿಗೆ ಮಧ್ಯಂತರ ತಡೆ ನೀಡಬೇಕು. ನಿಯಮ ಪಾಲನೆ ಮಾಡದೆ ಇರುವುದರಿಂದ ಪ್ರಕರಣ ರದ್ದುಗೊಳಿಸಬೇಕು’ ಎಂದು ಕೋರಿದರು.

ADVERTISEMENT

ಪ್ರಕರಣವೇನು?: ‘2019ರ ಲೋಕಸಭಾ ಚುನಾವಣೆ ವೇಳೆ ತೇಜಸ್ವಿ ಸೂರ್ಯ ಅವರು ಹಂಚಿದ್ದ ಕರಪತ್ರದಲ್ಲಿ ಪ್ರಕಾಶಕರು ಮತ್ತು ಮುದ್ರಕರ ವಿವರಗಳು ಇರಲಿಲ್ಲ. ಈ ಕರಪತ್ರಕ್ಕೆ ಖರ್ಚಾದ ಲೆಕ್ಕವನ್ನು ಮರೆ ಮಾಚಲಾಗಿದೆ. ಅಂತೆಯೇ ಇದು ಪ್ರಜಾ ಪ್ರತಿನಿಧಿ ಕಾಯ್ದೆಯ ಕಲಂ 127ರ ಉಲ್ಲಂಘನೆ.ಆದ್ದರಿಂದ, ತೇಜಸ್ವಿ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಸಿದ್ದಾಪುರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪೊಲೀಸರುಈ ದೂರನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ವರ್ಗಾಯಿಸಿದ್ದರು. ನ್ಯಾಯಾಲಯ ಇದನ್ನು
ಸಂಜ್ಞೇಯ (ಪರಿಗಣಿಸಲು ಅರ್ಹ) ಅಪರಾಧ ಎಂದು ಪರಿಗಣಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.