ADVERTISEMENT

ತುಟ್ಟಿಭತ್ಯೆ ಮುಂದೂಡುವ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2020, 2:15 IST
Last Updated 12 ಸೆಪ್ಟೆಂಬರ್ 2020, 2:15 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಉದ್ಯಮಗಳ ಕಾರ್ಮಿಕರಿಗೆ ನೀಡಬೇಕಿದ್ದ ವ್ಯತ್ಯಸ್ಥ ತುಟ್ಟಿಭತ್ಯೆಯನ್ನು(ವಿಡಿಎ) ಒಂದು ವರ್ಷಕ್ಕೆ ಮುಂದೂಡಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.

ಕನಿಷ್ಠ ವೇತನ ಕಾಯ್ದೆಯಡಿ ಗುರುತಿಸಲಾದ 82 ನಿಗದಿತ ಉದ್ಯೋಗಗಳಲ್ಲಿ ಸುಮಾರು 65 ಲಕ್ಷ ಕಾರ್ಮಿಕರಿಗೆ ವಿಡಿಎ ಪಾವತಿಯನ್ನು ಮುಂದೂಡಲು ಉದ್ಯೋಗದಾತರಿಗೆ ಅವಕಾಶ ನೀಡಿ ಜುಲೈ 20ರಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿತ್ತು.

ಇದನ್ನು ಪ್ರಶ್ನಿಸಿ ಕಾರ್ಮಿಕ ಸಂಘಟನೆಯಾದ ಎಐಟಿಯುಸಿ ಸಲ್ಲಿಸಿದ್ದ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ADVERTISEMENT

‘ಕಾರ್ಮಿಕ ಕಾಯ್ದೆಯ ಅಡಿಯಲ್ಲಿ ಈ ಆದೇಶ ಹೊರಡಿಸಿಲ್ಲ. ಆದೇಶದಲ್ಲಿನ ಉಲ್ಲೇಖಗಳನ್ನು ಗಮನಿಸಿದರೆ ಕಾರ್ಮಿಕ ಸಚಿವರು ಅಧಿಕಾರ ಚಲಾಯಿಸಿದ್ದಾರೆ ಎಂಬುದು ಗೊತ್ತಾಗುತ್ತದೆ’ ಎಂದು ಪೀಠ ಅಭಿಪ್ರಾಯಪಟ್ಟಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.