ADVERTISEMENT

ಪದವಿ ಹಂತದಲ್ಲಿ ಕನ್ನಡ ಕಲಿಕೆ ಕಡ್ಡಾಯ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2022, 7:11 IST
Last Updated 6 ಏಪ್ರಿಲ್ 2022, 7:11 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು:ರಾಷ್ಟ್ರೀಯ ಶಿಕ್ಷಣ ನೀತಿಯಡಿ ಪದವಿ ಹಂತದಲ್ಲಿ ಭಾಷೆಯಾಗಿಕನ್ನಡ ಕಲಿಕೆ ಕಡ್ಡಾಯಗೊಳಿಸಿದ್ದ ರಾಜ್ಯ ಸರ್ಕಾರದಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಸರ್ಕಾರದ ಆದೇಶವನ್ನು ಪ್ರಶ್ನಿಸಿ ಸಂಸ್ಕೃತ ಭಾರತಿ (ಕರ್ನಾಟಕ) ಟ್ರಸ್ಟ್ ಹಾಗೂ ಕೆಲ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

2021ರ ಆಗಸ್ಟ್ 7 ಮತ್ತು ಸೆಪ್ಟೆಂಬರ್ 15ರಂದು ಹೊರಡಿಸಲಾಗಿದ್ದ ಎರಡು ಆದೇಶಗಳಿಗೆ ನ್ಯಾಯಪೀಠ ಮಧ್ಯಂತರ ತಡೆ ನೀಡಿ ಆದೇಶಿಸಿತು.

ADVERTISEMENT

'ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ)-2020 ಹಾಗೂ ಅದರ ನಿಯಮಗಳಲ್ಲಿ ಯಾವುದೇ ಭಾಷೆಯನ್ನುಕಡ್ಡಾಯಗೊಳಿಸುವ ಸಂಬಂಧದ ಉಲ್ಲೇಖಗಳಿಲ್ಲ'ಎಂದು ಕೇಂದ್ರ ಸರ್ಕಾರ ಹೈಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಈ ತಡೆ ಆದೇಶ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.