ADVERTISEMENT

ಪ್ರಜ್ವಲ್‌ ರೇವಣ್ಣಗೆ ಹೈಕೋರ್ಟ್ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 17 ಜೂನ್ 2022, 19:23 IST
Last Updated 17 ಜೂನ್ 2022, 19:23 IST
   

ಬೆಂಗಳೂರು: ‘ಹಣ ಇದೆ ಅಂತಾ ವಕೀಲರನ್ನು ನೇಮಿಸಿಕೊಂಡು ಕೋರ್ಟ್‌ಗೆ ಹಾಜರಾಗುವುದನ್ನು ತಪ್ಪಿಸಿಕೊಂಡರೆ ಸುಮ್ಮನಿರಲು ಸಾಧ್ಯವಿಲ್ಲ. ಮುಂದಿನ ವಿಚಾರಣೆಗೆ ಅವರನ್ನು ಕೋರ್ಟ್‌ನಲ್ಲಿ ಹಾಜರಿರಲು ಹೇಳಿ’ ಎಂದುಸಂಸದ ಪ್ರಜ್ವಲ್‌ ರೇವಣ್ಣ ಪರ ವಕೀಲರಿಗೆ ಹೈಕೋರ್ಟ್‌ ಖಡಕ್‌ ಎಚ್ಚರಿಕೆ ನೀಡಿದೆ.

‘ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸಬೇಕು’ಎಂದು ಕೋರಿ ಪರಾಜಿತ ಬಿಜೆಪಿ ಅಭ್ಯರ್ಥಿ ಎ.ಮಂಜು ಮತ್ತು ಜಿ.ದೇವರಾಜೇ ಗೌಡ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಗಳನ್ನು ನ್ಯಾಯಮೂರ್ತಿ ಕೆ.ನಟರಾಜನ್‌ ಅವರಿದ್ದ ಏಕಸದಸ್ಯ ಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಅರ್ಜಿದಾರರನ್ನು ಮುಖ್ಯ ವಿಚಾರಣೆಗೆ ಒಳಪಡಿಸಿದ ನ್ಯಾಯಪೀಠ ಇದೇ 24ಕ್ಕೆ ಪ್ರಜ್ವಲ್‌ ರೇವಣ್ಣ ಕೋರ್ಟ್‌ಗೆ ಕಡ್ಡಾಯವಾಗಿ ಹಾಜರಾಗುವಂತೆ ಮೌಖಿಕವಾಗಿ ತಾಕೀತು ಮಾಡಿದೆ. ಅರ್ಜಿದಾರರ ಪರ ಹಿರಿಯ ವಕೀಲೆ ಪ್ರಮೀಳಾ ನೇಸರ್ಗಿ ಹಾಜರಾಗಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.