ADVERTISEMENT

ಹೈಕೋರ್ಟ್‌ನಲ್ಲಿ ಕೋವಿಡ್‌ ಹೊಸ ನಿಯಮ ಜಾರಿ: ವಿಡಿಯೊ ಕಾನ್ಪರೆನ್ಸ್ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 5 ಜನವರಿ 2022, 2:06 IST
Last Updated 5 ಜನವರಿ 2022, 2:06 IST
   

ಬೆಂಗಳೂರು:ಕೋವಿಡ್ ಸೋಂಕು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೈಕೋರ್ಟ್‌ನ ಬೆಂಗಳೂರು ಪ್ರಧಾನ ಪೀಠದ ಕಲಾಪಗಳು ಇದೇ 5ರಿಂದ (ಬುಧವಾರ)ಇದೇ 14ರವರೆಗೆ ವಿಡಿಯೊ ಕಾನ್ಪರೆನ್ಸ್ಮೂಲಕ ನಡೆಯಲಿವೆ.

ಈ ಕುರಿತಂತೆ ರಿಜಿಸ್ಟ್ರಾರ್ ಜನರಲ್ ಟಿ.ಜಿ.ಶಿವಶಂಕರೇಗೌಡ ಮಂಗಳವಾರ ಅಧಿಸೂಚನೆ ಹೊರಡಿಸಿದ್ದಾರೆ. ಬೆಂಗಳೂರಿನ ಹೈಕೋರ್ಟ್‌ ಪೀಠ ಹಾಗೂ ಎಲ್ಲ ವಿಚಾರಣಾ ನ್ಯಾಯಾಲಯಗಳಿಗೂ ಪ್ರತ್ಯೇಕ ಮಾರ್ಗಸೂಚಿಯನ್ನು ಜಾರಿಗೊಳಿಸಿದ್ದು, ‘ತುರ್ತು ಪ್ರಕರಣಗಳ ವಿಚಾರಣೆಗೆ ಆದ್ಯತೆ ನೀಡಲಾಗುವುದು’ ಎಂದು ತಿಳಿಸಲಾಗಿದೆ.

‘ಧಾರವಾಡ ಮತ್ತು ಕಲಬುರಗಿ ಪೀಠಗಳಲ್ಲಿ ಎಂದಿನಂತೆ ಭೌತಿಕ ವಿಚಾರಣೆ ಜೊತೆಗೆ ಹೈಬ್ರಿಡ್ ಮಾದರಿಯಲ್ಲೇ ಕಲಾಪ ಮುಂದುವರಿಯಲಿದೆ. ಪರಿಸ್ಥಿತಿಯನ್ನು ಗಮನಿಸಿ ಮಾರ್ಗಸೂಚಿ ಹಾಗೂ ಆದೇಶಗಳನ್ನು ಪರಿಷ್ಕರಿಸಲಾಗುವುದು’ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.