ADVERTISEMENT

ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿ: ಮೆಮೊ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 14 ಜೂನ್ 2020, 4:31 IST
Last Updated 14 ಜೂನ್ 2020, 4:31 IST
   

ಬೆಂಗಳೂರು: ‘ಕಟ್ಟಡ ಕಾರ್ಮಿಕರ ನೋಂದಣಿ, ಕಲ್ಯಾಣ ನಿಧಿ ಸಂಗ್ರಹದ ಲೆಕ್ಕ ಪರಿಶೋಧನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ 2018ರಲ್ಲಿ ನೀಡಿರುವ ತೀರ್ಪಿನ ಅನ್ವಯ ಕ್ರಮ ಕೈಗೊಳ್ಳಲಾಗಿದೆ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಈ ಕುರಿತಂತೆ ವಿಧಾನ ಪರಿಷತ್ತಿನ ಮಾಜಿ ಸದಸ್ಯ ರಮೇಶ್ ಬಾಬು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ‘ಕಟ್ಟಡ ಕಾರ್ಮಿಕರ ನೋಂದಣಿ, ಕಲ್ಯಾಣ ನಿಧಿ ಸಂಗ್ರಹ ಹಾಗೂ ಅದರ ಸಾಮಾಜಿಕ ಲೆಕ್ಕ ಪರಿಶೋಧನೆಗೆ ಸಂಬಂಧಿಸಿದಂತೆ 2018ರಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನಂತೆ ಕ್ರಮ ಕೈಗೊಳ್ಳಲಾಗಿದೆ’ ಎಂಬ ಬಗ್ಗೆ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಜ್ಞಾಪನಾ ಪತ್ರದ ಪ್ರತಿಯನ್ನು (ಮೆಮೊ) ನ್ಯಾಯಪೀಠಕ್ಕೆ ಸಲ್ಲಿಸಿದರು.

ADVERTISEMENT

ಪೂರಕ ದಾಖಲೆಗಳ ಪ್ರತಿಗಳನ್ನು ಅರ್ಜಿದಾರರಿಗೆ ಪೂರೈಸುವಂತೆ ಸೂಚಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿದೆ.

‘ರಾಜ್ಯದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಕಟ್ಟಡ ಹಾಗೂ ಇತರ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ನಿಧಿಯಿಂದ ತಲಾ ₹ 10 ಸಾವಿರ ಪರಿಹಾರ ನೀಡುವಂತೆ ಸರ್ಕಾರ ನಿರ್ದೇಶನ ನೀಡಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.