ಸಾಂದರ್ಭಿಕ ಚಿತ್ರ
– ಗೆಟ್ಟಿ ಚಿತ್ರ
ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಸರ್ಕಾರಿ ಪಾಲಿಟೆಕ್ನಿಕ್ ಸೇರಿದಂತೆ ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಖಾಲಿ ಇರುವ 2,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆ ಅನುಮತಿ ನೀಡಿದೆ.
ಪ್ರಥಮ ದರ್ಜೆ ಕಾಲೇಜುಗಳಲ್ಲಿ ವಿವಿಧ ವಿಷಯಗಳ 826, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ 941 ಹುದ್ದೆಗಳು, ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ 186 ಹಾಗೂ ಬೆಂಗಳೂರಿನ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದಲ್ಲಿ 47 ಬೋಧಕರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಉನ್ನತ ಶಿಕ್ಷಣ ಇಲಾಖೆ ಪ್ರಸ್ತಾವ ಸಲ್ಲಿಸಿತ್ತು.
ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಜತೆಗೆ, ಅಗತ್ಯವಿದ್ದರೆ ಹೊಸ ಹುದ್ದೆಗಳನ್ನು ಸೃಜಿಸುವ ಹಾಗೂ ಅಂತಹ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವ ಕುರಿತು ಪ್ರತ್ಯೇಕ ಪ್ರಸ್ತಾವನೆ ಸಲ್ಲಿಸಲು ಆರ್ಥಿಕ ಇಲಾಖೆ ಸೂಚಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.