
ಪ್ರಜಾವಾಣಿ ವಾರ್ತೆ
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವಾನಂದ ತಗಡೂರು ಅವರು 2025–28ನೇ ಸಾಲಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶಿವಾನಂದ ಅವರು ಸತತ ಮೂರನೇ ಬಾರಿಗೆ ಅಧ್ಯಕ್ಷರಾಗಿದ್ದಾರೆ.
ಉಪಾಧ್ಯಕ್ಷರಾಗಿ ಎಚ್.ಬಿ. ಮದನಗೌಡ, ಮತ್ತೀಕೆರೆ ಜಯರಾಮ, ಪ್ರಧಾನ ಕಾರ್ಯದರ್ಶಿಯಾಗಿ ಜಿ.ಸಿ. ಲೋಕೇಶ, ಕಾರ್ಯದರ್ಶಿಗಳಾಗಿ ಪುಂಡಲೀಕ ಬಿ. ಬಾಳೋಜಿ, ಸೋಮಶೇಖರ ಕೆರಗೋಡು, ನಿಂಗಪ್ಪ ಚಾವಡಿ, ರಾಜ್ಯ ಖಜಾಂಜಿಯಾಗಿ ಎಂ. ವಾಸುದೇವ ಹೊಳ್ಳ ಅವರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎನ್. ರವಿಕುಮಾರ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.