ADVERTISEMENT

ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ: ಸಹಾಯಧನಕ್ಕೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 31 ಜುಲೈ 2025, 19:38 IST
Last Updated 31 ಜುಲೈ 2025, 19:38 IST
<div class="paragraphs"><p>ಹಣ </p></div>

ಹಣ

   

ಬೆಂಗಳೂರು: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ 2025-26ನೇ ಸಾಲಿನ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಎಸ್‍ಎಸ್‍ಪಿ ಮೂಲಕ ಆನ್‍ಲೈನ್‍ನಲ್ಲಿ ನಡೆಯಲಿದೆ. ಕಾರ್ಮಿಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯಧನ ಪಡೆಯಲು ಅಕ್ಟೋಬರ್ 31ರೊಳಗೆ ವೆಬ್‍ಸೈಟ್ https://ssp.karnataka.gov.in/ ಮೂಲಕ ಅರ್ಜಿ ಸಲ್ಲಿಸಬೇಕು.

ಪ್ರತಿಭಾ ಪುರಸ್ಕಾರ: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ 2024-25ನೇ ಸಾಲಿನ ಶೈಕ್ಷಣಿಕ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಶೇಕಡ 90 ಕ್ಕಿಂತ ಹೆಚ್ಚು ಅಂಕ ಪಡೆದ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಿದೆ.

ADVERTISEMENT

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆ ದಿನ. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಂಬಂಧಿಸಿ ಫಲಾನುಭವಿಯು 2025ನೇ ಮೇ 2ರ ಪೂರ್ವದಲ್ಲಿ ಹಾಗೂ ಪಿಯುಸಿ ಪರೀಕ್ಷೆಗೆ ಸಂಬಂಧಿಸಿ ಫಲಾನುಭವಿಯು 2025ನೇ ಏಪ್ರಿಲ್ 8ರ ಪೂರ್ವದಲ್ಲಿ ಮಂಡಳಿಯಲ್ಲಿ ನೋಂದಣಿಯಾಗಿರಬೇಕು. ಅರ್ಜಿಯನ್ನು ವೆಬ್‍ಸೈಟ್ https://karbwwb.karnataka.gov.in ರಲ್ಲಿ ಸಲ್ಲಿಸಬಹುದು. ಮಾಹಿತಿಗೆ ಸಹಾಯವಾಣಿ 155214 ಸಂಪರ್ಕಿಸಿ ಎಂದು ಮಂಡಳಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.