ADVERTISEMENT

₹800 ಕೋಟಿ ಅವ್ಯವಹಾರ ಆರೋಪ ಆಧಾರರಹಿತ: ಕಾರ್ಮಿಕರ ಕಲ್ಯಾಣ ಮಂಡಳಿ ಸ್ಪಷ್ಟನೆ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2025, 11:13 IST
Last Updated 22 ಸೆಪ್ಟೆಂಬರ್ 2025, 11:13 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ನೋಂದಾಯಿತ ಕಾರ್ಮಿಕರಿಗೆ ಉಪಯೋಗಕ್ಕೆ ಬಾರದ ಯೋಜನೆಗಳಿಗೆ ₹800 ಕೋಟಿ ವೆಚ್ಚ ಮಾಡಿದೆ ಎಂಬ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘಗಳ ಹೋರಾಟ ಸಮನ್ವಯ ಸಮಿತಿ ಮಾಡಿರುವ ಆರೋಪ ಸಂಪೂರ್ಣ ಸುಳ್ಳು ಹಾಗೂ ಆಧಾರರಹಿತವಾಗಿವೆ ಎಂದು ಕಾರ್ಮಿಕರ ಕಲ್ಯಾಣ ಮಂಡಳಿ ಸ್ಪಷ್ಟಪಡಿಸಿದೆ.

ಈ ಸಂಬಂಧ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ.

ADVERTISEMENT

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಜಾರಿಗೊಳಿಸಲಾಗಿರುವ ಯೋಜನೆಗಳ ಕುರಿತು 'ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘಗಳ ಹೋರಾಟ ಸಮನ್ವಯ ಸಮಿತಿ' 2025ರ ಜೂನ್‌ 26ರಂದು ನಡೆದ ಪತ್ರಿಕಾ ಸುದ್ದಿಗೋಷ್ಟಿಯಲ್ಲಿ ಮಾಡಿದ ಆರೋಪಗಳು ಸಂಪೂರ್ಣ ಸುಳ್ಳು ಹಾಗೂ ಆಧಾರರಹಿತವಾಗಿವೆ ಎಂದು ಹೇಳಿದೆ.

ಈ ಸಂಬಂಧ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘಗಳ ಹೋರಾಟ ಸಮನ್ವಯ ಸಮಿತಿಯ ಗೌರವಾಧ್ಯಕ್ಷರು ಮತ್ತು ಇಬ್ಬರು ಸದಸ್ಯರಿಗೆ ನೋಟಿಸ್ ನೀಡಲಾಗಿದ್ದು, ಈ ಸಂಬಂಧ ಸಮಿತಿಯ ಗೌರವಾಧ್ಯಕ್ಷರಾದ ರಮೇಶ್ ಅವರು ತಮ್ಮ ಆರೋಪಗಳಿಗೆ ಯಾವುದೇ ಆಧಾರವಿಲ್ಲವೆಂದು ಒಪ್ಪಿಕೊಂಡು ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಕಾರ್ಯದರ್ಶಿಯವರನ್ನು ಪತ್ರದ ಮೂಲಕ ಕ್ಷಮೆಯಾಚಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಉಳಿದ ಇಬ್ಬರು ಸದಸ್ಯರು ಇದುವರೆಗೂ ಪ್ರತಿಕ್ರಿಯಿಸದೇ ಇರುವುದರಿಂದ ಅವರ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಡಳಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.