
ಬೆಂಗಳೂರು: ವಿಧಾನಸಭೆಯಲ್ಲಿ ಕಾಗದದ ಬಳಕೆಯನ್ನು ಬಿಟ್ಟು ಡಿಜಿಟಲೀಕರಣ ವ್ಯವಸ್ಥೆ ಜಾರಿಗೆ ತರಬೇಕು ಎಂದು ಕಾಂಗ್ರೆಸ್‌ನ ಎ.ಎಸ್.ಪೊನ್ನಣ್ಣ ಒತ್ತಾಯಿಸಿದರು.
ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲೆ ಮಾತನಾಡಿದ ಅವರು, ವಿಧಾನಸಭೆಯ ಕಲಾಪದಲ್ಲಿ ಕಾರ್ಯ ನಿರ್ವಹಿಸಲು ಐಪಾಡ್‌ಗಳ ಬಳಕೆ ಮಾಡುವ ಬಗ್ಗೆ ಗಂಭೀರ ಆಲೋಚನೆ ಮಾಡಬೇಕು ಎಂದು ಅವರು ಸಲಹೆ ನೀಡಿದರು.
ಕಲಾಪದ ವೇಳೆ ಪ್ರಶ್ನೋತ್ತರ ಮತ್ತು ಇತರ ಮಾಹಿತಿಗಳಿಗೆ ಭಾರಿ ಪ್ರಮಾಣದಲ್ಲಿ ಕಾಗದವನ್ನು ಬಳಸಲಾಗುತ್ತದೆ. ಆದರೆ, ಅದರ ಸದುಪಯೋಗ ಆಗುವುದಿಲ್ಲ. ಆದ್ದರಿಂದ, ಸಂಸತ್ತು ಮತ್ತು ಇತರ ಕೆಲವು ರಾಜ್ಯಗಳಲ್ಲಿರುವಂತೆ ಐಪಾಡ್ ಬಳಸುವುದು ಸೂಕ್ತ ಎಂದು ಹೇಳಿದರು.
ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. ₹4.5 ಲಕ್ಷ ಕೋಟಿ ಕರ್ನಾಟಕದಿಂದ ತೆರಿಗೆ ಸಂದಾಯವಾಗುತ್ತಿದೆ. ಆದರೆ, ಕೇಂದ್ರದಿಂದ ರಾಜ್ಯಕ್ಕೆ ಕೇವಲ ₹60 ಸಾವಿರ ಕೋಟಿ ಮಾತ್ರ ಬರುತ್ತಿದೆ. ಸುಮಾರು ₹1.25 ಲಕ್ಷ ಕೋಟಿ ಸರ್ಕಾರಕ್ಕೆ ನಷ್ಟವಾಗುತ್ತಿದೆ ಎಂದು ಪೊನ್ನಣ್ಣ ಕಿಡಿಕಾರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.