ADVERTISEMENT

ಪದವೀಧರ ಕ್ಷೇತ್ರಗಳ ಚುನಾವಣೆ| ಬಂಡಾಯ ಶಮನ: ವಿಜಯೇಂದ್ರ ವಿಶ್ವಾಸ

​ಪ್ರಜಾವಾಣಿ ವಾರ್ತೆ
Published 18 ಮೇ 2024, 15:40 IST
Last Updated 18 ಮೇ 2024, 15:40 IST
ಬಿ.ವೈ. ವಿಜಯೇಂದ್ರ
ಬಿ.ವೈ. ವಿಜಯೇಂದ್ರ   

ಬೆಂಗಳೂರು: ವಿಧಾನ ಪರಿಷತ್ತಿನ ವಿವಿಧ ಕ್ಷೇತ್ರಗಳಲ್ಲಿನ ಬಂಡಾಯ ಶಮನಗೊಳ್ಳಲಿವೆ. ದಕ್ಷಿಣ ಶಿಕ್ಷಕರ ಕ್ಷೇತ್ರ, ಈಶಾನ್ಯ ಪದವೀಧರ ಕ್ಷೇತ್ರಗಳ ಸಮಸ್ಯೆ ಬಗೆಹರಿಸಲಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ  ಬಿ.ವೈ.ವಿಜಯೇಂದ್ರ ಹೇಳಿದರು.

ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಪಕ್ಷದ ಹಿರಿಯ ಮುಖಂಡ ಸುರೇಶ್‌ ಸಜ್ಜನ್‌ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ನಿಂಗರಾಜ್‌ ನಾಮಪತ್ರ ಹಿಂಪಡೆಯಲು ಒ‍ಪ್ಪಿದ್ದಾರೆ. ನೈರುತ್ಯ ಪದವೀಧರ ಕ್ಷೇತ್ರದ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಾಗುತ್ತಿದೆ ಎಂದರು.

ವಿಧಾನ ಪರಿಷತ್‌ನ ಆರು ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಗೆ ಉಸ್ತುವಾರಿಗಳನ್ನು ನೇಮಿಸಲಾಗಿದೆ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.