ADVERTISEMENT

ವಿಧಾನ ಪರಿಷತ್‌: 10 ಮಸೂದೆ ಅಂಗೀಕಾರ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2025, 16:04 IST
Last Updated 17 ಡಿಸೆಂಬರ್ 2025, 16:04 IST
<div class="paragraphs"><p>ಬೆಳಗಾವಿ ಅಧಿವೇಶನ (ಪ್ರಾತಿನಿಧಿಕ ಚಿತ್ರ)</p></div>

ಬೆಳಗಾವಿ ಅಧಿವೇಶನ (ಪ್ರಾತಿನಿಧಿಕ ಚಿತ್ರ)

   

ಸುವರ್ಣ ವಿಧಾನಸೌಧ (ಬೆಳಗಾವಿ): ವಿಧಾನಸಭೆಯಲ್ಲಿ ಅಂಗೀಕೃತವಾಗಿದ್ದ 10 ಮಸೂದೆಗಳಿಗೆ ಬುಧವಾರ ವಿಧಾನಪರಿಷತ್‌ನಲ್ಲೂ ಅಂಗೀಕಾರ ದೊರೆಯಿತು.

ಚಂದ್ರಗುತ್ತಿ ಶ್ರೀ ರೇಣುಕಾಂಬ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮಸೂದೆ, ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮತ್ತು ಇತರೆ ಕೆಲ ಕಾನೂನುಗಳ ತಿದ್ದುಪಡಿ ಮಸೂದೆ, ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮರಾಯ ದತ್ತಿ ತಿದ್ದುಪಡಿ ಮಸೂದೆ, ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ಕ್ಷೇಮಾಭಿವೃದ್ಧಿ ಮಸೂದೆ, ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ ತಿದ್ದುಪಡಿ ಮಸೂದೆ, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಮಸೂದೆ, ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ತಿದ್ದುಪಡಿ ಮಸೂದೆ, ಕರ್ನಾಟಕ ಮನೆ ಬಾಡಿಗೆ ಮಸೂದೆ, ಶ್ರೀ ಮಲೆ ಮಾದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ತಿದ್ದುಪಡಿ ಮಸೂದೆ ಹಾಗೂ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಎರಡನೇ ತಿದ್ದುಪಡಿ ಮಸೂದೆಗಳನ್ನು ಪರಿಷತ್‌ ಅಂಗೀಕರಿಸಿತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.