ADVERTISEMENT

ವಿಧಾನ ಪರಿಷತ್‌: ಬಿರುಸಿನ ಮತದಾನ, ಬುಧವಾರ ಎಣಿಕೆ

​ಪ್ರಜಾವಾಣಿ ವಾರ್ತೆ
Published 13 ಜೂನ್ 2022, 20:08 IST
Last Updated 13 ಜೂನ್ 2022, 20:08 IST
   

ಬೆಂಗಳೂರು: ವಿಧಾನ ಪರಿಷತ್‌ನ ನಾಲ್ಕು ಕ್ಷೇತ್ರಗಳ ಪ್ರತಿನಿಧಿಗಳ ಆಯ್ಕೆಗೆ ಸೋಮವಾರ ಬಿರುಸಿನ ಮತದಾನ ನಡೆದಿದೆ. 11 ಜಿಲ್ಲೆಗಳ ವ್ಯಾಪ್ತಿಯಲ್ಲಿ ನಡೆದ ಮತದಾನ ಬಹುತೇಕ ಶಾಂತಿಯುತವಾಗಿ ಪೂರ್ಣಗೊಂಡಿದೆ.

ಸೋಮವಾರ ಬೆಳಿಗ್ಗೆ 8ರಿಂದ ಸಂಜೆ 5ರವರೆಗೆ ಮತದಾನ ನಡೆದಿದೆ. ಪ್ರಾಥಮಿಕ ಅಂದಾಜಿನ ಪ್ರಕಾರ, ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಅತ್ಯಧಿಕ ಶೇಕಡ 84ರಷ್ಟು ಮತಗಳ ಚಲಾವಣೆಯಾಗಿದೆ. ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ಶೇ 80ರಷ್ಟು ಮತದಾನವಾಗಿದ್ದರೆ, ದಕ್ಷಿಣ ಪದವೀಧರರ ಕ್ಷೇತ್ರದಲ್ಲಿ ಶೇ 70ರಷ್ಟು ಮತದಾರರು ಹಕ್ಕು ಚಲಾಯಿಸಿದ್ದಾರೆ. ವಾಯವ್ಯ ಪದವೀಧರರ ಕ್ಷೇತ್ರದಲ್ಲಿ ಶೇ 59ರಷ್ಟು ಮತದಾನವಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಯವರ ಕಚೇರಿ ಮಾಹಿತಿ ನೀಡಿದೆ.

11 ಜಿಲ್ಲೆಗಳ ವ್ಯಾಪ್ತಿಯಲ್ಲಿ ಒಟ್ಟು417 ಮತಗಟ್ಟೆಗಳಲ್ಲಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ವಾಯವ್ಯ ಪದವೀಧರ ಕ್ಷೇತ್ರವನ್ನು ಹೊರತು‍ಡಿಸಿದರೆ ಉಳಿದ ಮೂರೂ ಕ್ಷೇತ್ರಗಳಲ್ಲಿ ಬೆಳಿಗ್ಗೆಯಿಂದ ಸಂಜೆಯವರೆಗೂ ಬಿರುಸಿನ ಮತದಾನ ನಡೆಯಿತು. ವಾಯವ್ಯ ಪದವೀಧರ ಕ್ಷೇತ್ರದಲ್ಲಿ ಮತದಾನಕ್ಕೆ ತುಸು ಕಡಿಮೆ ಆಸಕ್ತಿ ವ್ಯಕ್ತವಾಯಿತು.

ADVERTISEMENT

ಬುಧವಾರ ಎಣಿಕೆ: ನಾಲ್ಕು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಒಟ್ಟು 49 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಮತ ಪೆಟ್ಟಿಗೆಗಳಲ್ಲಿ ಭದ್ರವಾಗಿದೆ. ಮತದಾನ ಅಂತ್ಯಗೊಂಡ ಬಳಿಕ ಮತ ಪೆಟ್ಟಿಗೆಗಳನ್ನು ಮೊಹರು ಮಾಡಿ, ಎಣಿಕೆ ಕೇಂದ್ರಗಳಿಗೆ ಸಾಗಿಸಲಾಗುತ್ತಿದೆ. ಬುಧವಾರ ಮತ ಎಣಿಕೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.