ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ ನಾಗರಾಜು ಯಾದವ್ ಮತ್ತು ಅಬ್ದುಲ್ ಜಬ್ಬಾರ್ ಮಂಗಳವಾರ ನಾಮಪತ್ರ ಸಲ್ಲಿಸಿದರು.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್, ಸಲೀಂ ಅಹ್ಮದ್, ಶಾಸಕರಾದ ಎಂ.ಬಿ.ಪಾಟೀಲ, ಆರ್.ವಿ.ದೇಶಪಾಂಡೆ, ರಾಜ್ಯಸಭಾ ಸದಸ್ಯನಾಸೀರ್ ಹುಸೇನ್ ಇದ್ದರು.
ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮಂಗಳವಾರ ತಮ್ಮ ಅಭ್ಯರ್ಥಿಗಳನ್ನು ಘೋಷಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.