ADVERTISEMENT

ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ಚುನಾವಣೆ ಘೋಷಣೆ: ಡಿ.10ಕ್ಕೆ ಮತದಾನ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2021, 8:39 IST
Last Updated 9 ನವೆಂಬರ್ 2021, 8:39 IST
ವಿಧಾನ ಪರಿಷತ್‌ನ ಪ್ರಾತಿನಿಧಿಕ ಚಿತ್ರ
ವಿಧಾನ ಪರಿಷತ್‌ನ ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ರಾಜ್ಯದ 20 ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಗೆ ನಡೆಯುವ ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗಿದ್ದು, ಡಿಸೆಂಬರ್ 10 ಕ್ಕೆ ಮತದಾನ ನಡೆಯಲಿದೆ.

ಒಟ್ಟು 25 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ವಿಧಾನಪರಿಷತ್ ನ ಸಭಾನಾಯಕ ಸಚಿವ ಕೋಟ ಶ್ರೀನಿವಾಸ ಪೂಜಾರಿ, ವಿರೋಧಪಕ್ಷದ ನಾಯಕ ಎಸ್.ಆರ್.ಪಾಟೀಲ ಅವರ ಅವಧಿಯೂ ಮುಗಿದಿದ್ದು ಚುನಾವಣೆ ಎದುರಿಸಬೇಕಾಗಿದೆ.

ನಾಮಪತ್ರ ಸಲ್ಲಿಸಲು ನ. 23 ಕೊನೆ ದಿನ. ನ. 24ಕ್ಕೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ನ. 26 ಕಡೆ ದಿನವಾಗಿರಲಿದೆ.

ADVERTISEMENT

ಡಿ. 10ರಂದು ಬೆಳಗ್ಗೆ 8ರಿಂದ ಸಂಜೆ 4ರ ವರೆಗೆ ಮತದಾನ ನಡೆಯಲಿದ್ದು, ಡಿ. 14ರಂದು ಫಲಿತಾಂಶ ಹೊರಬೀಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.