ADVERTISEMENT

ಕರ್ನಾಟಕ ವಿಧಾನ ಪರಿಷತ್‌: ವಿವಿಧ ಹುದ್ದೆಗಳ ನೇಮಕಾತಿಗೆ ಇಂದಿನಿಂದ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2025, 23:30 IST
Last Updated 21 ಮಾರ್ಚ್ 2025, 23:30 IST
<div class="paragraphs"><p>ಕೆಇಎ</p></div>

ಕೆಇಎ

   

ಬೆಂಗಳೂರು: ಕರ್ನಾಟಕ ವಿಧಾನಪರಿಷತ್‌ನ ವಿವಿಧ ಹುದ್ದೆಗಳ ನೇಮಕಾತಿಗೆ ಮಾರ್ಚ್‌ 22ರಿಂದ 25ರವರೆಗೆ ಲಿಖಿತ ಪರೀಕ್ಷೆ ನಡೆಸುತ್ತಿದೆ.

ಕಂಪ್ಯೂಟರ್‌ ನಿರ್ವಾಹಕರು, ಸಹಾಯಕ, ಕಿರಿಯ ಸಹಾಯಕ, ಹಿರಿಯ ಪ್ರೋಗ್ರಾಮರ್‌, ಡಾಟಾ ಎಂಟ್ರಿ ಸಹಾಯಕ ಸೇರಿದಂತೆ ಏಳು ಹುದ್ದೆಗಳಿಗೆ ಬೆಂಗಳೂರು ನಗರದ ಹತ್ತು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌. ಪ್ರಸನ್ನ ಹೇಳಿದ್ದಾರೆ. 

ADVERTISEMENT

ಒಂದೊಂದು ಹುದ್ದೆಗೆ ಒಂದೊಂದು ದಿನ ಪರೀಕ್ಷೆ ನಡೆಯಲಿದೆ. 4,868 ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಕಲು ಮಾಡಲು ಅವಕಾಶ ಇಲ್ಲದಂತೆ ಕ್ರಮಕೈಗೊಳ್ಳಲಾಗಿದೆ. 

ಸ್ಪರ್ಧಾತ್ಮಕ ಪರೀಕ್ಷೆಗೆ ಇರುವ ವಸ್ತ್ರಸಂಹಿತೆ ಈ ಪರೀಕ್ಷೆಗೂ ಅನ್ವಯವಾಗಲಿದೆ. ಆ ಪ್ರಕಾರ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಬೇಕು. ಅಕ್ರಮ ಎಸಗುವವರ ವಿರುದ್ಧ ಕಠಿಣ ಕ್ರಮ  ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.