ADVERTISEMENT

ವಿಧಾನ ಪರಿಷತ್ ಸದಸ್ಯರಾಗಿ ನಾಲ್ವರಿಂದ ಪ್ರಮಾಣ ವಚನ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2025, 9:13 IST
Last Updated 11 ಸೆಪ್ಟೆಂಬರ್ 2025, 9:13 IST
   

ಬೆಂಗಳೂರು: ಆರತಿ ಕೃಷ್ಣ, ರಮೇಶ್ ಬಾಬು, ಎಫ್. ಎಚ್. ಜಕ್ಕಪ್ಪನವರ್ ಮತ್ತು ಕೆ. ಶಿವಕುಮಾರ್ ಅವರು ವಿಧಾನ ಪರಿಷತ್ ಸದಸ್ಯರಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.

ಇತ್ತೀಚೆಗೆ ಈ ನಾಲ್ವರನ್ನು ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡಲಾಗಿತ್ತು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಡೆದ ಕಾರ್ಯಕ್ರಮದಲ್ಲಿ ಕಾರ್ಯಕ್ರಮದಲ್ಲಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಸಚಿವ ಜಿ. ಪರಮೇಶ್ವರ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್, ಪಶುಸಂಗೋಪನೆ ಸಚಿವ ವೆಂಕಟೇಶ್, ಸಣ್ಣ ನೀರಾವರಿ ಸಚಿವ. ಎನ್‌.ಎಸ್‌. ಬೋಸರಾಜು, ವಸತಿ ಸಚಿವ ಜಮೀರ್ ಅಹಮದ್ ಖಾನ್ ಮುಂತಾದವರು ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.