ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮಾರ್ಚ್ 22ರಿಂದ 25ರವರೆಗೆ ಲಿಖಿತ ಪರೀಕ್ಷೆ ನಡೆಸುತ್ತಿದ್ದು, ಬಿಗಿ ಕ್ರಮಗಳನ್ನು ಕೈಗೊಂಡಿದೆ.
ಕಂಪ್ಯೂಟರ್ ಆಪರೇಟರ್, ಸಹಾಯಕ, ಕಿರಿಯ ಸಹಾಯಕ, ಹಿರಿಯ ಪ್ರೋಗ್ರಾಮರ್, ಡಾಟಾ ಎಂಟ್ರಿ ಸಹಾಯಕ ಹೀಗೆ ವಿವಿಧ ಏಳು ಹುದ್ದೆಗಳಿಗೆ ಬೆಂಗಳೂರು ನಗರದ ಹತ್ತು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಒಂದೊಂದು ಹುದ್ದೆಗೆ ಒಂದೊಂದು ದಿನ ಪರೀಕ್ಷೆ ನಡೆಯಲಿದೆ. ಒಟ್ಟಾರೆ 4,868 ಮಂದಿ ಪರೀಕ್ಷೆ ಬರೆಯುತ್ತಿದ್ದು, ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಕಲಿಗೆ ಅವಕಾಶ ಇಲ್ಲದಂತೆ ನಿಗಾ ಇಡಲಾಗುವುದು ಎಂದು ಅವರು ವಿವರಿಸಿದ್ದಾರೆ.
ಸ್ಪರ್ಧಾತ್ಮಕ ಪರೀಕ್ಷೆ ಸಲುವಾಗಿ ವಸ್ತ್ರಸಂಹಿತೆ ಕೂಡ ಇದ್ದು, ಆ ಪ್ರಕಾರ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಬೇಕು. ಅಕ್ರಮ ಎಸಗುವವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.