ADVERTISEMENT

ತೆರೆಯಲಿರುವ ಮದ್ಯದ ಅಂಗಡಿ: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2020, 15:28 IST
Last Updated 29 ಮಾರ್ಚ್ 2020, 15:28 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಮದ್ಯದ ಅಂಗಡಿಗಳು ಭಾನುವಾರದಿಂದಮಧ್ಯಾಹ್ನ 2ರಿಂದ ರಾತ್ರಿ 7.30ರವರೆಗೆ ತೆರೆಯಲಿವೆ ಎಂಬ ಸುಳ್ಳು ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ತೆಲಂಗಾಣ ಸರ್ಕಾರದ ಲಾಂಛನ ಇರುವ ಲೆಟರ್ ಹೆಡ್‌ನಲ್ಲಿ ಕರ್ನಾಟಕ ಸರ್ಕಾರ ಎಂದು ಮುದ್ರಿಸಿ ಈ ರೀತಿ ಬರೆಯಲಾಗಿದೆ.

ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಅಬಕಾರಿ ಇಲಾಖೆ ಆಯುಕ್ತ ವಿ. ಯಶವಂತ್, ‘ಮದ್ಯದ ಅಂಗಡಿ ತೆರೆಯುವ ನಿರ್ಧಾರವನ್ನು ಸರ್ಕಾರ ಕೈಗೊಂಡಿಲ್ಲ. ಇದು ಸುಳ್ಳು ಸುದ್ದಿ’ ಎಂದು ಸ್ಪಷ್ಟಪಡಿಸಿದರು.

ADVERTISEMENT

‘ಮಾ.31ರವರೆಗೆ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ನಂತರ ಸರ್ಕಾರ ನೀಡುವ ನಿರ್ದೇಶನದಂತೆ ಮುಂದುವರೆಯುತ್ತೇವೆ’ ಎಂದು ಅವರು ತಿಳಿಸಿದರು.

‘ಕೇರಳ ಸೇರಿ ನೆರೆ ರಾಜ್ಯಗಳ ಮದ್ಯವನ್ನು ಅಗತ್ಯ ವಸ್ತುಗಳ ಪಟ್ಟಿಗೆ ಸೇರಿಸಿವೆ ಎಂಬ ಸುಳ್ಳು ಸುದ್ದಿಯೂ ಹರಿದಾಡುತ್ತಿದೆ. ಕೇರಳ ಸರ್ಕಾರದೊಂದಿಗೆ ಚರ್ಚಿಸಲಾಗಿದ್ದು, ಅಗತ್ಯ ಸೇವೆಗಳ ಪಟ್ಟಿಗೆ ಮದ್ಯವನ್ನು ಸೇರಿಸಿಲ್ಲ. ಎಲ್ಲಾ ರೀತಿಯ ಮದ್ಯದ ಅಂಗಡಿಗಳನ್ನು ಬಂದ್ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದೆ’ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.