ADVERTISEMENT

Karnataka Covid-19 Updates: 64 ಹೊಸ ಪ್ರಕರಣ, 1,671 ಸಕ್ರಿಯ ಪ್ರಕರಣ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 25 ಏಪ್ರಿಲ್ 2022, 13:42 IST
Last Updated 25 ಏಪ್ರಿಲ್ 2022, 13:42 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 64 ಪ್ರಕರಣಗಳು ವರದಿಯಾಗಿವೆ. ಇದೇ ಅವಧಿಯಲ್ಲಿ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಸದ್ಯ ರಾಜ್ಯದಲ್ಲಿ 1,671 ಸಕ್ರಿಯ ಪ್ರಕರಣಗಳಿದ್ದು, ಸೋಂಕಿನ ದೈನಂದಿನ ಪಾಸಿಟಿವಿಟಿ ದರ ಶೇ 1.38 ರಷ್ಟಿದೆ. ಮರಣ ಪ್ರಮಾಣ ಶೂನ್ಯವಾಗಿದೆ.

ಬೆಂಗಳೂರಿನಲ್ಲಿ 63 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 59 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ನಗರದಲ್ಲಿ 1,610 ಸಕ್ರಿಯ ಪ್ರಕರಣಗಳಿವೆ. ಇದನ್ನೂ ಹೊರತುಪಡಿಸಿದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಪ್ರಕರಣ ಮಾತ್ರ ಪತ್ತೆಯಾಗಿದೆ.

ADVERTISEMENT

ಉಳಿದಂತೆ ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ಬೆಂಗಳೂರು ಗ್ರಾಮಾಂತರ, ಬೀದರ್, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಧಾರವಾಡ, ಗದಗ, ಹಾಸನ, ಹಾವೇರಿ, ಕಲಬುರಗಿ, ಕೊಡಗು, ಕೋಲಾರ, ಕೊಪ್ಪಳ, ಮಂಡ್ಯ, ಮೈಸೂರು, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಉಡುಪಿ, ಉತ್ತರ ಕನ್ನಡ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಪ್ರಕರಣಗಳು ವರದಿಯಾಗಿಲ್ಲ.

ರಾಜ್ಯದಲ್ಲಿ ಈವರೆಗೂ 10.56 ಕೋಟಿಗೂ ಅಧಿಕ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.