ADVERTISEMENT

ಬೆಂಗಳೂರಿನ ಮೂವರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ: 3 ಕೆ.ಜಿ. ಚಿನ್ನ ಜಪ್ತಿ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2023, 4:56 IST
Last Updated 5 ಡಿಸೆಂಬರ್ 2023, 4:56 IST
   

ಬೆಂಗಳೂರು: ನಗರದ ಮೂವರು ಅಧಿಕಾರಿಗಳು ಸೇರಿದಂತೆ ರಾಜ್ಯದ 63 ಕಡೆ ಲೋಕಾಯುಕ್ತ ಪೊಲೀಸರು ಮಂಗಳವಾರ ಬೆಳಿಗ್ಗೆ ದಾಳಿ ಮಾಡಿದ್ದಾರೆ.

ಬೆಂಗಳೂರಿನ ಬೆಸ್ಕಾಂ ಜಯನಗರ ಉಪವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಚನ್ನಕೇಶವ, ಬೆಸ್ಕಾಂ ವಿಚಕ್ಷಣಾ ದಳದ ಕಾರ್ಯನಿರ್ವಾಹಕ ಎಂಜಿನಿಯರ್ ಸುಧಾಕರ್ ರೆಡ್ಡಿ, ಕಣಿಮಿಣಿಕೆ ಹಾಲು ಉತ್ಪಾದಕರ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಎಸ್. ಕೃಷ್ಣಮೂರ್ತಿ ಅವರ‌ ಮನೆ ಹಾಗೂ ಇತರೆ ಸ್ಥಳಗಳ ಮೇಲೆ ದಾಳಿ‌ ನಡೆದಿದೆ.

ಲೋಕಾಯುಕ್ತ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ADVERTISEMENT

ಬೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ಚನ್ನಕೇಶವ್ ಮನೆಯಲ್ಲಿ , ₹6 ಲಕ್ಷ‌ ನಗದು, 3 ಕೆ.ಜಿ. ಚಿನ್ನ ಸೇರಿದಂತೆ ₹1.5 ಕೋಟಿ ಮೌಲ್ಯದ ವಸ್ತುಗಳನ್ನು ‌ಜಪ್ತಿ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.