ADVERTISEMENT

ಉದ್ಧವ್ ಠಾಕ್ರೆ ಹೇಳಿಕೆ ಭಾರತದ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ: ಬಿಎಸ್‌ವೈ

​ಪ್ರಜಾವಾಣಿ ವಾರ್ತೆ
Published 18 ಜನವರಿ 2021, 12:13 IST
Last Updated 18 ಜನವರಿ 2021, 12:13 IST
ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ   

ಉಡುಪಿ: ಯಾವ ಕಾರಣಕ್ಕೂ ರಾಜ್ಯದ ಒಂದಿಂಚು ಭೂಮಿಯನ್ನು ಮಹಾರಾಷ್ಟ್ರಕ್ಕೆ ಬಿಟ್ಟುಕೊಡುವ ಪ್ರಶ್ನೆ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಆದಿ ಉಡುಪಿಯ ಹೆಲಿಪ್ಯಾಡ್‌ನಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, 'ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಯ ಉದ್ಧಟತನದ ಹೇಳಿಕೆ ಭಾರತದ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ. ಮಹಾಜನ್ ವರದಿ ಅಂತಿಮವಾಗಿದ್ದರೂ ಗಡಿ ವಿವಾದ ತೆಗೆಯುತ್ತಿರುವುದು ಖಂಡನೀಯ' ಎಂದರು.

ರಾಜ್ಯದಲ್ಲಿ ಮರಾಠಿಗರು ಹಾಗೂ ಕನ್ನಡಿಗರು ಒಂದೇ ತಾಯಿ ಮಕ್ಕಳಂತೆ ಬದುಕುತ್ತಿದ್ದಾರೆ. ಗಡಿ ಜಿಲ್ಲೆಗಳಲ್ಲಿ ಸೌಹಾರ್ದಯುತ ವಾತಾವರಣ ಕೆಡಿಸುವ ಹಾಗೂ ಅಶಾಂತಿ ಮೂಡಿಸುವ ಕೆಲಸ ಸರಿಯಲ್ಲ. ಗಡಿ ಕುರಿತ ವಿವಾದಾತ್ಮಕ ಹೇಳಿಕೆಗಳು ಉದ್ಧವ್ ಠಾಕ್ರೆಗೆ ಗೌರವ ತರುವಂಥದಲ್ಲ ಎಂದರು.

ADVERTISEMENT

ಮುಖ್ಯಮಂತ್ರಿ ಯಡಿಯೂರಪ್ಪ ಕೃಷ್ಣಮಠದಲ್ಲಿ ಪರ್ಯಾಯ ಪಂಚ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.