ADVERTISEMENT

ಯುವ ವೈದ್ಯನಿಗೆ ಅಬುಧಾಬಿಯಲ್ಲಿ ವಾರ್ಷಿಕ ₹ 1 ಕೋಟಿಯ ಉದ್ಯೋಗ

​ಪ್ರಜಾವಾಣಿ ವಾರ್ತೆ
Published 22 ಜುಲೈ 2021, 20:12 IST
Last Updated 22 ಜುಲೈ 2021, 20:12 IST
ಉದ್ಯೋಗಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕೌಶಲಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಸೆಲ್ವಕುಮಾರ್‌ (ಮಧ್ಯದಲ್ಲಿ) ಅವರಿಂದ ಡಾ. ಗಂಗಿರೆಡ್ಡಿ ಪಡೆದುಕೊಂಡರು. ಕೌಶಲಾಭಿವೃದ್ಧಿ‌ ನಿಗಮದ ವ್ಯವಸ್ಥಾಪಕ ‌ನಿರ್ದೇಶಕ ಅಶ್ವಿನ್ ಗೌಡ ಇದ್ದರು.
ಉದ್ಯೋಗಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕೌಶಲಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಸೆಲ್ವಕುಮಾರ್‌ (ಮಧ್ಯದಲ್ಲಿ) ಅವರಿಂದ ಡಾ. ಗಂಗಿರೆಡ್ಡಿ ಪಡೆದುಕೊಂಡರು. ಕೌಶಲಾಭಿವೃದ್ಧಿ‌ ನಿಗಮದ ವ್ಯವಸ್ಥಾಪಕ ‌ನಿರ್ದೇಶಕ ಅಶ್ವಿನ್ ಗೌಡ ಇದ್ದರು.   

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಆರಂಭಿಸಿರುವ ಅಂತರರಾಷ್ಟ್ರೀಯ ವಲಸೆ ಕೇಂದ್ರದ ಮೂಲಕ ರಾಜ್ಯದ ಯುವ ತಜ್ಞ ವೈದ್ಯರೊಬ್ಬರಿಗೆ ಅಬುಧಾಬಿಯಲ್ಲಿ ವರ್ಷಕ್ಕೆ 1 ಕೋಟಿ ಪ್ಯಾಕೇಜ್‌ನ ಉದ್ಯೋಗ ಸಿಕ್ಕಿದೆ.

ಯುಎಇಯಲ್ಲಿರುವ ಪ್ರತಿಷ್ಠಿತ ರೆಸ್ಪಾನ್ಸ್‌ ಪ್ಲಸ್‌ ಮೆಡಿಕಲ್‌ ಆಸ್ಪತ್ರೆ, ವಿಶೇಷ ತಜ್ಞ ವೈದ್ಯರ ಹುದ್ದೆಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯ ನಿವಾಸಿ ಶ್ವಾಸಕೋಶ ತಜ್ಞ ಗಂಗಿರೆಡ್ಡಿ ಅವರನ್ನು ನೇಮಿಸಿಕೊಂಡಿದೆ.

ಈ ಬಗ್ಗೆ ಮಾಹಿತಿ ನೀಡಿದ ಕೌಶಲಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ ಅಶ್ವತ್ಥನಾರಾಯಣ, ‘ಉದ್ಯೋಗಕ್ಕೆ ಸಂಬಂಧಿಸಿದ ಎಲ್ಲ ದಾಖಲೆ ಪತ್ರಗಳನ್ನು ಇಲಾಖೆಯ ಕಾರ್ಯದರ್ಶಿ ಸೆಲ್ವಕುಮಾರ್‌ ಅವರಿಂದ ಗಂಗಿರೆಡ್ಡಿ ಪಡೆದುಕೊಂಡಿದ್ದಾರೆ. ರೆಡ್ಡಿ ಅವರಿಂದ ವೀಸಾ, ವಿಮಾನ ಪ್ರಯಾಣ, ವಿಮೆ, ವಸತಿ ಇತ್ಯಾದಿಗಳ ಯಾವುದೇ ಸೇವಾ ಶುಲ್ಕ ಪಡೆಯದೆ ಎಲ್ಲ ಪ್ರಕ್ರಿಯ ಮುಗಿಸಿಕೊಡಲಾಗಿದೆ’ ಎಂದರು.

ADVERTISEMENT

‘ವಿದೇಶಗಳಿಗೆ ರಾಜ್ಯದ ಕುಶಲ ಮಾನವ ಸಂಪನ್ಮೂಲ ಒದಗಿಸುವ ಪ್ರಕ್ರಿಯೆ ಮತ್ತೆ ಆರಂಭಿಸಲಾಗಿದೆ. ಬೇಡಿಕೆಗೆ ತಕ್ಕಂತೆ ವೈದ್ಯರು, ದಾದಿಯರು ಸೇರಿದಂತೆ ಯಾವುದೇ ಕ್ಷೇತ್ರಕ್ಕೆ ಸಿಬ್ಬಂದಿ ಇದ್ದರೂ ಕೌಶಲಾಭಿವೃದ್ಧಿ ನಿಗಮದ ಅಡಿಯಲ್ಲಿ ಸ್ಥಾಪಿಸಲಾಗಿರುವ ವಲಸೆ ಕೇಂದ್ರದ ಮೂಲಕ ಕಳುಹಿಸಲಾಗುವುದು. ಯಾವುದೇ ಖಾಸಗಿ ಏಜೆನ್ಸಿಗಳನ್ನು ನಂಬಿಕೊಂಡು ಯಾರೂ ಮೋಸ ಹೋಗುವುದು ಬೇಡ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.