ಚಿಕ್ಕಮಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಸಿ.ಟಿ.ರವಿ ತಿಳಿಸಿದ್ದಾರೆ.
ಶನಿವಾರ ರಾಜೀನಾಮೆ ನೀಡಿದ್ದೇನೆ. ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ ಎಂದು ಅವರು ತಿಳಿಸಿದ್ದಾರೆ.
ಇದೇ 5ರಂದು ನವದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳ ಸಭೆ ಇದೆ. ಈ ಸಭೆಗೆ ತೆರಳಲಿದ್ದೇನೆ ಎಂದು ತಿಳಿಸಿದ್ದಾರೆ.
ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಅವರು ನೇಮಕವಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.