ADVERTISEMENT

ಕೊರೊನಾ ಬಗ್ಗೆ ಆತಂಕ ಬೇಡ, ಮುನ್ನೆಚ್ಚರಿಕೆ ವಹಿಸಿ: ಸಚಿವ ಡಾ. ಸುಧಾಕರ್

​ಪ್ರಜಾವಾಣಿ ವಾರ್ತೆ
Published 6 ಜುಲೈ 2020, 9:46 IST
Last Updated 6 ಜುಲೈ 2020, 9:46 IST
ಡಾ. ಸುಧಾಕರ್
ಡಾ. ಸುಧಾಕರ್   

ಬೆಂಗಳೂರು: ಕೊರೊನಾ ವೈರಸ್ ಸೋಂಕಿನ ಬಗ್ಗೆ ಆತಂಕ ಬೇಡ, ಆದರೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ವೈದ್ಯಕೀಯ ಶಿಕ್ಷಣ ‌ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ‘ಕೊರೊನಾ ಬಗ್ಗೆ ಆತಂಕ ಬೇಡ, ಮುನ್ನೆಚ್ಚರಿಕೆ ಇರಲಿ. ಮಳೆಗಾಲ ಆರಂಭ ಆಗಿರುವುದರಿಂದ ಶೀತ ಜ್ವರ, ನೆಗಡಿ, ಕೆಮ್ಮು ಬರುವುದು ಸಾಮಾನ್ಯ. ನಿಮಗೆ ಯಾವುದೇ ರೀತಿಯ ಲಕ್ಷಣ ಕಂಡುಬಂದ ಕೂಡಲೇ ನಿಮ್ಮ ಹತ್ತಿರದ ಫೀವರ್ ಕ್ಲಿನಿಕ್‌ಗೆ ಭೇಟಿ ನೀಡಿ ವೈದ್ಯರ ಸಲಹೆ ಪಡೆಯಿರಿ. ಪಾರ್ಥಮಿಕ ಹಂತದಲ್ಲೇ ಎಚ್ಚರ ವಹಿಸಿದರೆ ಚಿಕಿತ್ಸ ಸುಲಭ’ ಎಂದು ಉಲ್ಲೇಖಿಸಿದ್ದಾರೆ.

ರಾಜ್ಯದಾದ್ಯಂತ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಬೆನ್ನಲ್ಲೇ ಸಚಿವರು ಟ್ವೀಟ್ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.