ADVERTISEMENT

ವಿಧಾನಪರಿಷತ್‌ನ ಶಿಕ್ಷಕರು, ಪದವೀಧರರ ಕ್ಷೇತ್ರ: ಕಾಂಗ್ರೆಸ್‌ ಪಟ್ಟಿ ಪ್ರಕಟ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2025, 16:09 IST
Last Updated 30 ಡಿಸೆಂಬರ್ 2025, 16:09 IST
ಕಾಂಗ್ರೆಸ್‌
ಕಾಂಗ್ರೆಸ್‌   

ಬೆಂಗಳೂರು: ವಿಧಾನಪರಿಷತ್‌ನ ಶಿಕ್ಷಕರು ಹಾಗೂ ಪದವೀಧರರ ಕ್ಷೇತ್ರಗಳಿಗೆ 2026ರ ನವೆಂಬರ್‌ನಲ್ಲಿ ನಡೆಯುವ ಚುನಾವಣೆಗೆ ಸ್ಪರ್ಧಿಸುವ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್‌ ಬಿಡುಗಡೆ ಮಾಡಿದೆ.

ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ವಿಧಾನಪರಿಷತ್‌ನ ಹಾಲಿ ಸದಸ್ಯ ಪುಟ್ಟಣ್ಣ ಅವರನ್ನೇ ಕಣಕ್ಕೆ ಇಳಿಸಲಾಗುತ್ತಿದೆ. ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ ಮೋಹನ್‌ ಲಿಂಬಿಕಾಯಿ, ಆಗ್ನೇಯ ಪದವೀಧರರ ಕ್ಷೇತ್ರಕ್ಕೆ ಶಶಿ ಹುಲಿಕುಂಟೆ ಮಠ್‌, ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಶರಣಪ್ಪ ಮತ್ತೂರು ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT