ADVERTISEMENT

ವಿಧಾನ ಪರಿಷತ್: ಹೊರಟ್ಟಿ, ಹುಕ್ಕೇರಿ ಆಯ್ಕೆ

ಎರಡು ಕ್ಷೇತ್ರ ಕಳೆದುಕೊಂಡ ಜೆಡಿಎಸ್‌; ಕಾಂಗ್ರೆಸ್ ಗಳಿಕೆ

​ಪ್ರಜಾವಾಣಿ ವಾರ್ತೆ
Published 15 ಜೂನ್ 2022, 19:50 IST
Last Updated 15 ಜೂನ್ 2022, 19:50 IST
ಬಸವರಾಜ ಹೊರಟ್ಟಿ
ಬಸವರಾಜ ಹೊರಟ್ಟಿ   

ಬೆಂಗಳೂರು: ವಿಧಾನ ಪರಿಷತ್ತಿನ ನಾಲ್ಕು ಕ್ಷೇತ್ರಗಳಿಗೆ ನಡೆದ ಚುನಾವಣೆ ಪೈಕಿ ಮೂರು ಕ್ಷೇತ್ರಗಳ ಫಲಿತಾಂಶ ಬುಧವಾರ ಘೋಷಣೆಯಾಗಿದ್ದು, ಜೆಡಿಎಸ್ ತೊರೆದು ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಬಸವರಾಜ ಹೊರಟ್ಟಿ ಎಂಟನೇ ಬಾರಿ ವಿಜಯ ಸಾಧಿಸಿ ದಾಖಲೆ ಬರೆದಿದ್ದಾರೆ.

ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಪ್ರಕಾಶ್ ಹುಕ್ಕೇರಿ ಜಯ ಗಳಿಸಿದ್ದಾರೆ.

ಈ ಹಿಂದೆ ಕ್ಷೇತ್ರ ಪ್ರತಿನಿಧಿಸುತ್ತಿದ್ದ ಬಿಜೆಪಿಯ ಅರುಣ ಶಹಾಪುರಸೋಲನುಭವಿಸಿದ್ದಾರೆ.

ADVERTISEMENT

ವಾಯವ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಹಣಮಂತ ನಿರಾಣಿ ಜಯ ಗಳಿಸಿದ್ದಾರೆ. ಜೆಡಿಎಸ್‌ನ ಕೆ.ಟಿ. ಶ್ರೀಕಂಠೇಗೌಡ ಪ್ರತಿನಿಧಿಸುತ್ತಿದ್ದ ದಕ್ಷಿಣ ಪದವೀಧರರ ಕ್ಷೇತ್ರದ ಮತ ಎಣಿಕೆಯು ಪತ್ರಿಕೆ ಮುದ್ರಣಕ್ಕೆ ಹೋಗುವವರೆಗೂ ಮುಂದುವರಿದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.