ADVERTISEMENT

600 ಶುಶ್ರೂಷಾಧಿಕಾರಿಗಳ ಹುದ್ದೆ ಭರ್ತಿಗೆ ಆದೇಶ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2025, 15:25 IST
Last Updated 22 ಸೆಪ್ಟೆಂಬರ್ 2025, 15:25 IST
   

ಬೆಂಗಳೂರು: ಆರೋಗ್ಯ ಇಲಾಖೆಯಡಿ ಮಂಜೂರಾಗಿ ಖಾಲಿ ಇರುವ 600 ಶುಶ್ರೂಷಾಧಿಕಾರಿಗಳ ಹುದ್ದೆ ಭರ್ತಿಗೆ ಆದೇಶ ಹೊರಡಿಸಲಾಗಿದೆ. 

ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಇಲಾಖೆಯಲ್ಲಿ ನೇರ ನೇಮಕಾತಿ ಮೂಲಕ ಶುಶ್ರೂಷಾಧಿಕಾರಿಗಳ ಹುದ್ದೆ ಭರ್ತಿಯಾದ ಬಳಿಕ, 600 ಶುಶ್ರೂಷಾಧಿಕಾರಿಗಳ ಗುತ್ತಿಗೆ ಸೇವೆಯನ್ನು ರದ್ದುಗೊಳಿಸಬೇಕು ಎಂದು ತಿಳಿಸಲಾಗಿದೆ.

ಇಲಾಖೆ ಆಯುಕ್ತರು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುವ ಮೊದಲು, ಸಿಬ್ಬಂದಿ ಕೊರತೆ ಇರುವ ಆರೋಗ್ಯ ಕೇಂದ್ರಗಳ ವಿವರವನ್ನು ಸರ್ಕಾರಕ್ಕೆ ಜಿಲ್ಲಾವಾರು ಸಲ್ಲಿಸಬೇಕು ಎಂದು ಆದೇಶದಲ್ಲಿ ಹೇಳಲಾಗಿದೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.