ADVERTISEMENT

ಕರ್ನಾಟಕ ಲೇವಾದೇವಿದಾರರ ತಿದ್ದುಪಡಿ ಮಸೂದೆಗೆ ಒಪ್ಪಿಗೆ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2021, 19:15 IST
Last Updated 17 ಮಾರ್ಚ್ 2021, 19:15 IST

ಬೆಂಗಳೂರು: ವಿರೋಧ ಪಕ್ಷ ಕಾಂಗ್ರೆಸ್ ಸದಸ್ಯರ ಸಭಾತ್ಯಾಗದ ನಡುವೆಯೇ ‘ಕರ್ನಾಟಕ ಲೇವಾದೇವಿದಾರರ ತಿದ್ದುಪಡಿ ಮಸೂದೆ–2021’ಗೆ ವಿಧಾನ ಪರಿಷತ್‌ನಲ್ಲಿ ಬುಧವಾರ ಅಂಗೀಕಾರಗೊಂಡಿತು.‌

ಮಸೂದೆಯನ್ನು ಮಂಡಿಸಿದ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಅನುಮೋದನೆ ನೀಡುವಂತೆ ಕೋರಿದರು. ಈ ವೇಳೆ, ಕಾಂಗ್ರೆಸ್‌ನ ಬಿ.ಕೆ. ಹರಿಪ್ರಸಾದ್, ಚರ್ಚೆಯಲ್ಲಿ ಭಾಗವಹಿಸದೇ ಇರುವ ನಿರ್ಧಾರ ಪ್ರಕಟಿಸಿದರು. ‘ಕೋರ್ಟ್‌ಗೆ ಹೋಗಿ ಪ್ರತಿಬಂಧಕಾಜ್ಞೆ ತಂದಿರುವ ಸಚಿವರಿಗೆ ಪ್ರಶ್ನೆ ಕೇಳದೇ ಇರಲು ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಧರಿಸಲಾಗಿದೆ. ಹೀಗಾಗಿ, ಸಚಿವರಿಗೆ ನಾವು ಪ್ರಶ್ನೆ ಕೇಳುವುದಿಲ್ಲ’ ಎಂದು ತಮ್ಮ ಪಕ್ಷದ ಸದಸ್ಯರೊಂದಿಗೆ ಸಭಾತ್ಯಾಗ ಮಾಡಿದರು.

ಜೆಡಿಎಸ್‌ನ ಅಪ್ಪಾಜಿ ಗೌಡ, ಗೋವಿಂದರಾಜು ಮಸೂದೆಯನ್ನು ಸ್ವಾಗತಿಸಿದರು. ಧ್ವನಿಮತದ ಮೂಲಕ ಮಸೂದೆಗೆ ಪರಿಷತ್ ಅಂಗೀಕಾರ ನೀಡಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.