ಬೆಂಗಳೂರು: ಪ್ರಸಕ್ತ ಸಾಲಿನಿಂದ (2024–25) ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ), ಹಿರಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್–1 ಮತ್ತು ಗ್ರೇಡ್–2, ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಯನ್ನು ಕೌನ್ಸೆಲಿಂಗ್ ಮೂಲಕ ಮಾಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ನಿರ್ಧರಿಸಿದೆ.
ಈ ಕುರಿತು ಆದೇಶ ಹೊರಡಿಸಿರುವ ಇಲಾಖೆ, ‘ಭ್ರಷ್ಟಾಚಾರ ತಡೆಯಲು ಮತ್ತು ದಕ್ಷತೆಯನ್ನು ಹೆಚ್ಚಿಸಲು ಈ ಕ್ರಮ ತೆಗೆದುಕೊಳ್ಳಲಾಗುತ್ತಿದೆ’ ಎಂದು ಹೇಳಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ತ್ವರಿತ ಸೇವಾ ಪೂರೈಕೆ ಮತ್ತು ಭ್ರಷ್ಟಾಚಾರ ತಡೆಯಲು ಸಿಬ್ಬಂದಿ ವರ್ಗಾವಣೆಯನ್ನು ಕೌನ್ಸೆಲಿಂಗ್ ಮಾಡಲು ಮಾಡಲಾಗುವುದು’ ಎಂದು ಪ್ರಸಕ್ತ ಸಾಲಿನ ಬಜೆಟ್ ಭಾಷಣದಲ್ಲಿ ಘೋಷಿಸಿದ್ದರು. ಅದರಂತೆ, ಈ ಆದೇಶ ಹೊರಡಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.